ಮಾಜಿ ಸುಬೇದಾರ್ ಶ್ರೀಶೈಲ್ಯ ಬರಾಗಣಿ ಅವರಿಗೆ ಭವ್ಯ ಸನ್ಮಾನ
Great tribute to former Subedar Srishailya Baragani
ಬೀಳಗಿ, 02: ದೇಶದ ಗಡಿಯಲ್ಲಿ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಕರ್ತವ್ಯ ನಿರ್ವಹಿಸುವ ಸೈನಿಕರ ಸೇವೆ ಅತ್ಯಂತ ಶ್ರೇಷ್ಠವಾದುದು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಡುವ ಯೋಧರ ತ್ಯಾಗವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಚರಂತಿಮಠದ ಪೂಜ್ಯ ವೀರಸಂಗಮೇಶ್ವರ ಶಿವಾಚಾರ್ಯರು ಹೇಳಿದರು.
ತಾಲೂಕಿನ ಮಾರೂತೇಶ್ವರ ದೇವಸ್ಥಾನದ ಆವರಣದಲ್ಲಿ ಸುಬೇದಾರ್ ಶ್ರೀಶೈಲಯ್ಯ ಬರಾಗಣಿ ಅವರ ಸ್ವಾಗತ ಹಾಗೂ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, “ಸಿಯಾಚಿನ್ನಂತಹ ದುರ್ಗಮ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಶ್ರೀಶೈಲಯ್ಯ ಅವರ ಕಾರ್ಯ ಯುವಕರಿಗೆ ಮಾದರಿಯಾಗಿದೆ. ಅವರ ಸೇವಾ ಮನೋಭಾವದಿಂದ ಪ್ರೇರಿತರಾಗಿ ಹೆಚ್ಚಿನ ಯುವಕರು ಸೇನೆ ಸೇರಿ ದೇಶಸೇವೆಗೆ ಮುಂದಾಗಬೇಕು” ಎಂದು ಕರೆ ನೀಡಿದರು.
ರಾವಿವ ಸಂಘದ ಚೇರ್ಮನ್ ಬಸವರಾಜ ಖೋತ್ ಮಾತನಾಡಿ, “ಮೂರು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸುಬೇದಾರ್ ಶ್ರೀಶೈಲಯ್ಯ ಅವರು ರಾಷ್ಟ್ರ ರಕ್ಷಣೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸೇವೆ ಸಮಾಜಕ್ಕೆ ಸದಾ ಪ್ರೇರಣೆಯಾಗಿರುತ್ತದೆ” ಎಂದರು.
ಗ್ರಾಮ ಮುಖಂಡ ವೆಂಕನಗೌಡ ಪಾಟೀಲ ಮಾತನಾಡಿ, “ಭಾರತೀಯ ಸೇನೆಯಲ್ಲಿ ಸುಬೇದಾರ್ ಆಗಿ ಸಲ್ಲಿಸಿದ ಅವರ ನಿಸ್ವಾರ್ಥ ಸೇವೆ, ಶಿಸ್ತು ಮತ್ತು ದೇಶಭಕ್ತಿ ಶ್ಲಾಘನೀಯ. ಇಂತಹ ಸಾಧಕರನ್ನು ಗೌರವಿಸುವುದು ಸಮಾಜದ ಹೆಮ್ಮೆಯ ಸಂಗತಿ” ಎಂದು ಹೇಳಿದರು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಾಮಣ್ಣ ಯಡಹಳ್ಳಿ ಹಾಗೂ ಮಲ್ಲಿಕಾರ್ಜುನ ಪತ್ತಾರ ಮಾತನಾಡಿ, ನಿವೃತ್ತ ಯೋಧರನ್ನು ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದ್ದು, ಅವರ ಅನುಭವಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 