ಮಾರಕ ಕಾಯಿಲೆಯ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಅಗತ್ಯ : ಡಾ.ಸತೀಶ
Greater awareness is needed to control deadly disease: Dr. Satish
ಲೋಕದರ್ಶನ ವರದಿ
ಶಿಗ್ಗಾವಿ 21: ಡೆಂಘೀ ಜ್ವರವು ಮುಖ್ಯವಾಗಿ 'ಈಡಿಸ್‌ಈಜಿಪ್ತ' ಎಂಬ ಹೆಣ್ಣು ಜಾತಿಯ ಸೊಳ್ಳೆಯ ಕಚ್ಚುವುದರಿಂದ ಹರಡುತ್ತದೆ. ಈ ಮಾರಕ ಕಾಯಿಲೆಯ ನಿಯಂತ್ರಣಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯ ಎಂದು ತಾಲೂಕ ಆರೋಗ್ಯಾಧಿಕಾರಿ ಡಾಽ ಸತೀಶ ಎ.ಆರ್. ತಿಳಿಸಿದರು. ಪಟ್ಟಣದ ಶ್ರೀ ರಂಭಾಪುರಿ ಮಹಾವಿದ್ಯಾಲಯದಲ್ಲಿ ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಎಸ್.ಆರ್. ಜೆ.ವಿ.ಜೆ.ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟು ಕೊಂಡರೆ ಇಂತಹ ಮಾರಕ ಕಾಯಿಲೆಯಿಂದ ದೂರವಿರಬಹುದು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಡಾಽ ಅಶೋಕಕುಮಾರ ಅವರು ಡೆಂಘೀ ತಡೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸೊಳ್ಳೆಗಳ ನಿಯಂತ್ರಣದ ಕುರಿತು ಉಪನ್ಯಾಸ ನೀಡಿದರು. ಫಾರ್ಮಸಿ ಅಧಿಕಾರಿ ಆನಂದಗೌಡ ಹಿರೇಗೌಡ್ರ ಮಾತನಾಡಿ ಇತ್ತೀಚಿಗೆ ಯುವ ಪೀಳಿಗೆ ಹಾದಿ ತಪ್ಪುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿ, ವ್ಯಸನಮುಕ್ತ ಜೀವನ ನಡೆಸುವಂತೆ ಪ್ರೇರೇಪಿಸಿದರು. ಕಾಲೇಜ್ ಆಡಳಿತಾಧಿಕಾರಿ ಲಿಂಗಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರಾದ ಡಾ? ಬಿ.ವೈ. ತೊಂಡಿಹಾಳ, ರೆಡ್ ಕ್ರಾಸ್ ಘಟಕದ ಅಧಿಕಾರಿ ಚಾಂದಬೀಬಿ ನದಾಫ್ ಹಾಗೂ ಕಾಲೇಜಿನ ಉಪನ್ಯಾಸಕರು, ಆರೋಗ್ಯ ಇಲಾಖೆಯ ಕುಶಾಲ ಕುಂದಗೋಳ, ಎಸ್.ಸಿ. ಕೋರಿ, ದೀಪಾ ಪಾಟೀಲ, ಉಣಕಲ್ಲ ನಾಗನಗೌಡ ಮಲ್ಲಿಕಾರ್ಜುನಗೌಡ ಕೊಣ್ಣೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 