ವಿಶ್ವಕರ್ಮ ಸಮಾಜದ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಅಗತ್ಯ: ಮುಂಡರಗಿ ನಾಗರಾಜ್
Greater priority needs to be given to the education of children from the Vishwakarma community: Mund
ಲೋಕದರ್ಶನ ವರದಿ
ಬಳ್ಳಾರಿ, ಸೆ.17: ವಿಶ್ವಕರ್ಮ ಸಮಾಜವು ಕರಕುಶಲತೆ ಹಾಗೂ ಶಿಲ್ಪಕಲೆಗೆ ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಸಾಂಪ್ರದಾಯಿಕ ಕಸುಬಿನ ಜೊತೆಗೆ ಸಮುದಾಯದ ಮಕ್ಕಳು ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಾ. ಬಾಬು ಜಗಜೀವನರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ನಿಯಮಿತ ಅಧ್ಯಕ್ಷ ಮುಂಡರಗಿ ನಾಗರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಎಚ್.ಆರ್. ಗವಿಯಪ್ಪ ವೃತ್ತದ ಸಮೀಪ ಈ ಹಿಂದೆ ಸೂಕ್ತ ನಿರ್ವಹಣೆಯಿಲ್ಲದೆ ಸೊರಗಿದ್ದ ವೃತ್ತಕ್ಕೆ ನಗರ ಶಾಸಕರು ಹಾಗೂ ಮಹಾನಗರ ಪಾಲಿಕೆಯ ಮೇಯರ್ ಅವರ ಮುತುವರ್ಜಿಯಿಂದ ‘ವಿಶ್ವಕರ್ಮ ವೃತ್ತ’ ಎಂದು ನಾಮಕರಣ ಮಾಡಲಾಗಿದೆ. ಈ ವೃತ್ತವನ್ನು ಹಸಿರುಮಯಗೊಳಿಸಿ ಸುಂದರೀಕರಣ ಮಾಡಬೇಕು. ಅಮರಶಿಲ್ಪಿ ಜಕಣಾಚಾರ್ಯರ ಆಕರ್ಷಕ ಪ್ರತಿಮೆ ಸ್ಥಾಪಿಸುವುದು ಸಮುದಾಯದ ಆಶಯವಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 