ಭವಿಷ್ಯಕ್ಕಾಗಿ ಹಸಿರು ಸಂಕಲ್ಪ: ಜೈನ್ ಹೆರಿಟೇಜ್ ಶಾಲೆಯಲ್ಲಿ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ
Green resolve for the future: Golden Arrow Award presented at Jain Heritage School
ಬೆಳಗಾವಿ 05: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜೈನ್ ಹೆರಿಟೇಜ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಪ್ರಕೃತಿಯಿಂದ ಪ್ರೇರಣೆ ಹಿ ಭವಿಷ್ಯಕ್ಕಾಗಿ ಹವಾಮಾನ” ಎಂಬ ಘೋಷವಾಕ್ಯದಡಿ ಗೋಲ್ಡನ್ ಆ್ಯರೋ ಅವಾರ್ಡ-2026 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಕಾರ್ಯಕ್ರಮದಲ್ಲಿ ಜೈನ್ ಹೆರಿಟೇಜ್ ಶಾಲೆಯ ಕಬ್ಸ್ ಮತ್ತು ಬುಲ್ಬುಲ್ಸ್ ವಿದ್ಯಾರ್ಥಿಗಳು ಓಷಧೀಯ ಸಸ್ಯಗಳು, ಸೀಡ್ ಬಾಲ್ಗಳು (ಬೀಜ ಉಂಡೆಗಳು) ಹಾಗೂ ಸಾವಯವ ಗೊಬ್ಬರ ತಯಾರಿಕಾ ಘಟಕ (ಕಾಂಪೋಸ್ಟ್ ಪಿಟ್) ಒಳಗೊಂಡ ಪರಿಸರ ಜಾಗೃತಿ ಪ್ರದರ್ಶನವನ್ನು ಏರಿ್ಡಸಿ ಪರಿಸರ ಸಂರಕ್ಷಣೆಯ ಬಗ್ಗೆ ಬದ್ಧತೆಯನ್ನು ಮೆರೆದರು.
ವಿದ್ಯಾರ್ಥಿಗಳು ಪರಿಸರಕ್ಕೆ ಎದುರಾಗಿರುವ ವಿವಿಧ ಸವಾಲುಗಳು ಹಾಗೂ ಅವುಗಳಿಗೆ ಕೈಗೊಳ್ಳಬಹುದಾದ ಸರಳ ಮತ್ತು ಪರಿಣಾಮಕಾರಿ ಪರಿಹಾರಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರತಿನಿಧಿ ಹಾಗೂ ಜಿಲ್ಲಾ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ ಗೋಪಾಲಕೃಷ್ಣ ಸಂತಾಂಗಿ, ಪರಿಸರ ಅಧಿಕಾರಿ ಹನುಮಂತಪ್ಪ, ವಿಜ್ಞಾನಿ ಡಾ. ಪಾಟೀಲ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳಗಾವಿ ಜಿಲ್ಲಾ ಸಂಘಟನಾ ಆಯುಕ್ತ ವಿಠ್ಠಲ್ ಎಸ್.ಬಿ. ಹಾಗೂ ರಾಜಕುಮಾರ್ ಕೆ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಪರಿಸರ ಕಾಳಜಿ ಮತ್ತು ಉತ್ಸಾಹವನ್ನು ಶ್ಲಾಘಿಸಿದ ಗಣ್ಯರು, ಪರಿಸರ ಜಾಗೃತಿ, ಸುಸ್ಥಿರ ಜೀವನಶೈಲಿ ಹಾಗೂ ಪ್ರಕೃತಿ ಸಂರಕ್ಷಣೆಯ ಜವಾಬ್ದಾರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಪರಿಸರ ವಿಷಯಾಧಾರಿತ ಪ್ರದರ್ಶನವೂ ನಡೆಯಿತು. ಶಾಲೆಯ ಪ್ರಾಂಶುಪಾಲರಾದ ರೋಹಿಣಿ ಕೆ.ಬಿ. ಹಾಗೂ ಮುಖ್ಯ ಆಡಳಿತಾಧಿಕಾರಿ ಆ್ಯಮಿ ದೋಶಿ ಕಾರ್ಯಕ್ರಮ ಆಯೋಜಿಸಿ, ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೆಳಗಾವಿ ಜಿಲ್ಲೆಯ 120 ಕಬ್ಸ್ ಮತ್ತು ಬುಲ್ಬುಲ್ಸ್ ವಿದ್ಯಾರ್ಥಿಗಳಿಗೆ ಗೋಲ್ಡನ್ ಆ್ಯರೋ ಅವಾರ್ಡ-2026 ಪ್ರದಾನ ಮಾಡಲಾಯಿತು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕಬ್ಸ್ ಮತ್ತು ಬುಲ್ಬುಲ್ಸ್ ವಿಭಾಗದ ಅತ್ಯುನ್ನತ ಗೌರವವಾದ ಈ ಪ್ರಶಸ್ತಿಯು ವಿದ್ಯಾರ್ಥಿಗಳ ಸಾಧನೆ, ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಸಮರೆ್ಣಯನ್ನು ಗುರುತಿಸಿ ನೀಡಲಾಗುತ್ತದೆ.
ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಪಲ್ಲವಿ ನಾಡಕರ್ಣಿ ಹಾಗೂ ಸಾಗರ್ ಅವರನ್ನು ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿ, ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನವನ್ನು ಪ್ರಶಂಸಿಸಿದರು.ಪರಿಸರ ಸಂರಕ್ಷಣೆ ಮತ್ತು ಸಮಾಜ ಸೇವೆಯತ್ತ ಮತ್ತಷ್ಟು ಬದ್ಧತೆಯನ್ನು ವ್ಯಕ್ತಪಡಿಸುವ ಮೂಲಕ ಕಾರ್ಯಕ್ರಮವು ಸ್ಕೌಟ್ಸ್ ಮತ್ತು ಗೈಡ್ಸ್ ನ ಉನ್ನತ ಆದರ್ಶಗಳನ್ನು ಪ್ರತಿಬಿಂಬಿಸಿತು.“ಪರಿಸರ ಸಂರಕ್ಷಣೆಯತ್ತ ಇಡುವ ಪ್ರತಿಯೊಂದು ಸಣ್ಣ ಹೆಜ್ಜೆಯೂ ಹಸಿರು ಮತ್ತು ಉತ್ತಮ ನಾಳೆಯ ನಿರ್ಮಾಣಕ್ಕೆ ಕಾರಣವಾಗುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 