ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
Groundbreaking ceremony for CC road construction
ಲಕ್ಷ್ಮೇಶ್ವರ, 22: ತಾಲ್ಲೂಕಿನ ಗೋಜನೂರು ಗ್ರಾಮದಿಂದ ಅಕ್ಕಿಗುಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಅವರು ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಹಿರಿಯ ಮುಖಂಡರೊಂದಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಹಲವು ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಇದಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಹೇಳಿದರು.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ಸಿಸಿ ರಸ್ತೆ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸಬೇಕು. ಗ್ರಾಮಸ್ಥರೂ ಕಾಮಗಾರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗೋಜನೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಂಜುನಾಥ ಚಲವಾದಿ, ಮಹಾಂತಗೌಡ ಪಾಟೀಲ, ರಮೇಶ ದಾನದಮನಿ, ಕುಮಾರಸ್ವಾಮಿ ತಿಮ್ಮರೆಡ್ಡಿ, ತುಕಾರಾಮ ಪೂಜಾರ, ಜಾನು ಲಮಾಣಿ, ಈರಣ್ಣ ಪೂಜಾರ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಯುವ ಮುಖಂಡರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 