ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Groundbreaking ceremony for new building construction
ಹಾನಗಲ್ 25: ವಿವಿಧ ಹೊಸ ಕಾರ್ಯಕ್ರಮಗಳ ಅನುಷ್ಠಾನದ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಶ್ರಮಿಸುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಮಸೀಹಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ವರ್ಷದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಶೈಕ್ಷಣಿಕ ಉದ್ದೇಶಕ್ಕಾಗಿ ಅತಿ ಹೆಚ್ಚು ಅನುದಾನ ವಿನಿಯೋಗಿಸಲು ತೀರ್ಮಾನಿಸಲಾಗಿದ್ದು, ಅದರ ಪ್ರಯೋಜನವಾಗಿ ಹಾನಗಲ್ಲ ತಾಲ್ಲೂಕಿನಲ್ಲಿಯೂ ಹೆಚ್ಚಿನ ಅನುದಾನ ಹರಿದುಬರಲಿದೆ ಎಂದು ತಿಳಿಸಿದ ಅವರು ಕಾಲ ಬದಲಾಗಿದ್ದು, ಶಿಕ್ಷಣಕ್ಕೆ ಮಾತ್ರ ಉತ್ತಮ ಬದುಕು ರೂಪಿಸಬಲ್ಲ ಶಕ್ತಿ ಇದೆ. ಹಾಗಾಗಿ ಅಲ್ಪಸಂಖ್ಯಾತ ಬಂಧುಗಳು ಸಹ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ. ಶಿಕ್ಷಣದಿಂದ ಮಾತ್ರ ವಿಕಾಸ ಸಾಧ್ಯವಿದೆ ಎನ್ನುವ ಸತ್ಯ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಮಾಹಿತಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸೀರ ಅರಾಫತ್ ಮಕಾನದಾರ, ಮಸೀಹಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮುನೀರಅಹ್ಮದ ಬಾಳೂರ, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮೆಹಬೂಬಅಲಿ ಬ್ಯಾಡಗಿ, ಉಪಾಧ್ಯಕ್ಷ ರಿಯಾಜ ಹಾವಣಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣವರ, ಮುಖಂಡರಾದ ಖ್ವಾಜಾಮೊದೀನ ಅಣ್ಣಿಗೇರಿ, ಗಫಾರಸಾಬ ಪಾಟೀಲ, ಸತ್ತಾರಸಾಬ ಅರಳೇಶ್ವರ, ಪುಟ್ಟಪ್ಪ ನರೇಗಲ್, ಮೌಲಾನಾ ಅಹ್ಮದ ಬಾಶಾ ಶೇಖಜಿ, ಮೌಲಾನಾ ತನ್ವೀರ, ಮೌಲಾನಾ ಮಹ್ಮದಗೌಸ ಚಾವೂಸ, ಅಲ್ತಾಫ ಶಿರಹಟ್ಟಿ, ಗುಲಾಬಸಾಬ ಉಪ್ಪಣಸಿ, ಸುಲೇಮಾನ ಸಿಲಾರ, ಸಾಧಿಕ್ ಮಳಗಿ, ಮೆಹಬೂಬಲಿ ಜಾಲೇಗಾರ, ಮುಶ್ತಾಕ್ ಕಾರಡಗಿ, ಸಾಧಿಕ ಹಸನಾಬಾದಿ, ಇನಾಯತಖಾನ ಪಠಾಣ, ಮಹ್ಮದ್‌ಇಸಾಕ್ ಮಕಾನದಾರ, ಸುಲೇಮಾನ ಶೇಖ, ಬಿಇಒ ಆರ್.ವಿ.ಚಿನ್ನಿಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 