ಪಶು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಪಶು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ Groundbreaking ceremony for the construction of a new building for the veterinary hospital

 

ಲೋಕದರ್ಶನ ವರದಿ 

ಹೂವಿನಹಡಗಲಿ 08:   ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ತಾಲೂಕು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳ ಸಹಯೋಗದಲ್ಲಿ  ಶನಿವಾರ ನಡೆದ ಪಶು ಆಸ್ಪತ್ರೆಯ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕ ಎಲ್‌.ಕೃಷ್ಣನಾಯಕ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.ನಂತರ ಮಾತನಾಡಿ   ಉತ್ತಮ ಗುಣಮಟ್ಟದ ನೂತನ ಕಟ್ಟಡದ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದೆ. ಗುತ್ತಿಗೆದಾರರು ಗುಣಮಟ್ಟತೆಯನ್ನು ಕಾಪಾಡಬೇಕು ಎಂದರು.ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿ, ಬಿಜೆಪಿ ಪಕ್ಷದ ಮುಖಂಡರು ಇದ್ದರು.