ಭಕ್ತ ಕನಕದಾಸರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಗುಡ್ಡಲಿ ಪೂಜೆ
Groundbreaking ceremony for the installation of a bronze statue of the devotee-poet Kanakadasa.
ಲೋಕದರ್ಶನ ವರದಿ
ಹಾವೇರಿ, ಜು. ೩: ಭಕ್ತ ಕನಕದಾಸರ ಕರ್ಮಭೂಮಿ ಕಾಗಿನೆಲೆಗೆ ಹೋಗುವ ಮಾರ್ಗದ ವೃತ್ತದಲ್ಲಿ ಕನಕದಾಸರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಗುರುವಾರ ಗುಡ್ಡಲಿ ಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನAದಪುರಿ ಸ್ವಾಮೀಜಿ ಮಾತನಾಡಿ, ಕನಕದಾಸರ ಮೂರ್ತಿ ಪ್ರತಿಷ್ಠಾಪನೆ ಮಾಡುವುದು ಶ್ಲಾಘನೀಯ ಕಾರ್ಯ. ಆದರೆ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಮೂರ್ತಿಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಹೇಳಿದರು. ಮೂರ್ತಿ ಪ್ರತಿಷ್ಠಾಪನೆಯ ನಂತರ ಸ್ಥಳವನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕುರಬ ಸಮಾಜದ ಮುಖಂಡ ಎಸ್.ಎಫ್.ಎನ್. ಗಾಜೀಗೌಡ್ರ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಮೂರ್ತಿ ಸ್ಥಾಪನೆ ಬಹುದಿನಗಳ ಕನಸಾಗಿತ್ತು. ಸಮಾಜದ ಸಹಕಾರ, ಜನರ ದೇಣಿಗೆ ಹಾಗೂ ಸರ್ಕಾರದ ನೆರವಿನಿಂದ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಮೂರ್ತಿ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.
ತಿರುಪತಿಯ ಕನಕದಾಸರ ಮೂರ್ತಿ ನಿರ್ಮಿಸಿದ ಶಿಲ್ಪಿಯವರಿಂದಲೇ ಹಾವೇರಿಯ ಮೂರ್ತಿಯನ್ನೂ ನಿರ್ಮಿಸಲಾಗುತ್ತಿದೆ. ಸುಮಾರು ೧೨ ಲಕ್ಷ ರೂ. ವೆಚ್ಚದಲ್ಲಿ ಮೂರ್ತಿ ಸಿದ್ಧವಾಗುತ್ತಿದ್ದು, ಮುಂಗಡ ಹಣವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಾಸಕ ಬಸವರಾಜ ಶಿವಣ್ಣನವರ್ ಮಾತನಾಡಿ, ಸಮಾಜದ ಸಹಕಾರದಿಂದ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿರುವುದು ಸಂತಸದ ಸಂಗತಿ. ಮೂರ್ತಿಯೊಂದಿಗೆ ವೃತ್ತದ ಅಭಿವೃದ್ಧಿ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಸೇರಿದಂತೆ ಜಿಲ್ಲಾ ಕುರಬ ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 