ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆ ಆಯೋಜನೆ
Group dance competition to Kannada songs organized as part of Kannada Rajyotsava
ಹಾವೇರಿ 29 : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರಕಾರಿ ನೌಕರರಿಗೆ ರಾಜ್ಯಮಟ್ಟದ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ ಆಸಕ್ತ ಸರಕಾರಿ ನೌಕರರು ಪಾಲ್ಗೊಳ್ಳಬಹುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಕರಿಗಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರಕಾರಿ ನೌಕರರಿಗೆ ರಾಜ್ಯಮಟ್ಟದ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 75 ಸಾವಿರ ರೂ., ತೃತೀಯ ಬಹುಮಾನ 50 ಸಾವಿರ ರೂ.ಹಾಗೂ ಸಮಾಧಾನಕರ ಬಹುಮಾನ 20 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ನೋಂದಣಿ ಮಾಡಿಸಿಕೊಳ್ಳಲು ನ.2ರಂದು ಸಂಜೆ 5ಗಂಟೆ ಕೊನೆಯ ದಿನವಾಗಿದೆ. ಆದ್ದರಿಂದ ಜಿಲ್ಲೆಯ ಆಸಕ್ತ ಸರಕಾರಿ ನೌಕರರು/ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಗೂಗಲ್ ನಮೂನೆಯ ಸಂಪರ್ಕ ಲಿಂಕ್‌ನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 