ಗಿಡ-ಮರ ಬೆಳೆಸಿ ಪರಿಸರ ಸಂರಕ್ಷಿಸಿ; ನ್ಯಾಯಾದೀಶ ನಾಗೇಶ ಮೋಗೇರ
Grow trees and protect the environment; Justice Nagesh Mogera
ಲೋಕದರ್ಶನ ವರದಿ
ಸಿಂದಗಿ 05 : ಪರಿಸರ ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ. ಮನುಷ್ಯನಿಗೆ ನೈಸರ್ಗಿಕವಾಗಿ ಉಸಿರಾಟ ದೊರೆಯಲು ಗಿಡ-ಮರಗಳು ಪರಿಸರದ ಜೀವನಾಡಿಗಳು ಎಂದು ಹಿರಿಯ ದಿವಾಣಿ ನ್ಯಾಯಾದೀಶ ನಾಗೇಶ ಮೊಗೇರ ಹೇಳಿದರು.
ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯದ ಆವರಣದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಿಬಾಗ ವಿಜಯಪುರ, ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಲಯ ಹಾಗೂ ಕಾನೂನು ಸೆವಾ ಸಮಿತಿ ಇವರ ಸಹಯೋಗದಲ್ಲಿ ಪರಿಸರ ದಿನಾಚರಣೆ ನಿಮಿತ್ಯ ಸಸಿಗೆ ನೀರೂಣೀಸುವ ಮೂಲಕ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಿ ಮಾತನಾಡಿ, ಭೂಮಿ ತಾಯಿಯ ಒಡಲಲ್ಲಿ ಗಿಡ ಮರ ಬೆಳೆಸಿದರೆ ನಮಗೆ ಶುದ್ಧವಾದ ಗಾಳಿ, ಸಕಾಲಕ್ಕೆ ಮಳೆ ಬೆಳೆ ಹಾಗೂ ಪರಿಸರದ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಸಹಕಾರಿಯಾಗಿದ್ದು, ಎಲ್ಲೆಡೆ ಗಿಡ ಮರಗಳನ್ನು ಬೆಳೆಸುವ ಪರಿಪಾಠ ಬೆಳೆಸಬೇಕಾಗಿದೆ ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ ಮಾತನಾಡಿ, ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ ನೀಡುತ್ತವೆ. ನೆರಳು, ಹಣ್ಣು ನೀಡಿ ನೆರವಾಗುತ್ತವೆ ಆದರೆ ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳುಮಾಡಿ ನಾಶ ಮಾಡುತ್ತಿದ್ದಾನೆ ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 