ಲೋಕದರ್ಶನ ವರದಿ
ಬೆಳಗಾವಿ.ನ.9: ಇತ್ತಿಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಮಾನಸಿಕ ಮತ್ತು ದೈಹಿಕ ಕಿರುಕುಳ ಹೆಚ್ಚಾಗುತ್ತಿದ್ದು, ಇವುಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಮಹಿಳಾ ಆರಕ್ಷಕ ಉಪ ನಿರೀಕ್ಷಕರಾದ ಶ್ರೀಮತಿ ರಾಜಶ್ರೀ ಕದಮ್ ಅವರು ಅಭಿಪ್ರಾಯಪಟ್ಟರು.
ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದಲ್ಲಿನ ದೇವೇಂದ್ರ ಜಿನಗೌಡ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಮೇಲೆ ಪ್ರತಿನಿತ್ಯ ಕಿರುಕುಳ ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಕಠಿಣ ಪ್ರಸಂಗಗಳು ಎದುರಾದಾಗ ಪರಿಸ್ಥಿತಿಯನ್ನು ಎದುರಿಸಲು ಹೆಣ್ಣು ಮಕ್ಕಳ ಸಮರ್ಥವಾಗಿರಬೇಕು. ಇದಕ್ಕೆ ಮಾನಸಿಕ ಧೈರ್ಯ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಕರು ಮತ್ತು ಶಾಲಾ ಶಿಕ್ಷಕರು ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸುವ ಕಾರ್ಯ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಇತ್ತಿಚಿನ ದಿನಗಳಲ್ಲಿ ಕೆಲ ಸಮಾಜಘಾತುಕ ಶಕ್ತಿಗಳು ಶಾಲೆಗಳನ್ನು ಗುರಿಯಾಗಿಸಿಕೊಂಡು ಶಾಲಾ ಆವರಣದ ಬಳಿ ಗಾಂಜಾ, ಅಫಿಮು ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಇಂತಹ ಘಟನೆಗಳು ನಿಮಗೆ ಕಂಡು ಬಂದಲ್ಲಿ ತತ್ಕ್ಷಣ ಸಮೀಪದ ಪೋಲಿಸ ಠಾಣೆಗೆ ಪೋನ ಮಾಡಿ ಮಾಹಿತಿ ಒದಗಿಸಬೇಕೆಂದು ರಾಜಶ್ರೀ ಕದಮ್ ಅವರು ವಿದ್ಯಾಥರ್ಿಗಳಲ್ಲಿ ಮನವಿ ಮಾಡಿದರು.
ಸಮಾರಂಭದಲ್ಲಿ ಶಾಲೆಯ ಕಾರ್ಯದಶರ್ಿ ಶರದ ಬಾಳಿಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ಪಾಟೀಲ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥರ್ಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.