ಗೃಹ ಜ್ಯೋತಿ ಯೋಜನೆ: ಫಲಾನುಭವಿಗಳಿಗೆ ಸೌಲಭ್ಯ ಪರೀಶೀಲನೆ
Gruha Jyothi Scheme: Verification of benefits for beneficiaries
ಕೊಪ್ಪಳ 24: ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಮರು ಪರೀಶೀಲನೆ ಕಾರ್ಯವು ನಗರದ 15ನೇ ವಾರ್ಡ್ನಲ್ಲಿ ನಡೆಯಿತು. ಯೋಜನೆಯ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಸಮರ್ಕವಾಗಿ ತಲುಪುತ್ತಿದೆಯೇ ಎಂಬುದನ್ನು ಪರೀಶೀಲಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜೆಸ್ಕಾಂ ಕೊಪ್ಪಳ ಉಪ ವಿಭಾಗದ ಸಹಾಯಕ ಅಭಿಯಂತರ ಸೈಯದ್ ಯೂನಸ್ ಅವರು ಮಾತನಾಡಿ, ಗೃಹ ಜ್ಯೋತಿ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಇಲಾಖೆಯ ಗಮನಕ್ಕೆ ತರುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ಮಾನ್ವಿ ಪಾಷಾ, ಕಿರಿಯ ಅಭಿಯಂತರ ನಾಗೇಂದ್ರ ಓಣಿ, ಹಿರಿಯರಾದ ಇಸ್ಮಾಯಿಲ್ ಸಾಬ್ ಸಿದ್ದನಕೊಪ್ಪ, ಖಾಜಾ ಸಾಬ್ ಹನುಕುಂಟಿ, ಮದಾರನ್ ಸಾಬ್ ಪೀಟರ್, ಬಾಳೆಸಾಬ್ ಬೆಟಗೇರಿ, ರಿಯಾಜ್ ಹನುಕುಂಟಿ, ಮೆಹಬೂಬ್ ಹನುಕುಂಟಿ ಸೇರಿದಂತೆ ಹಲವರು, ಫಲಾನುಭವಿಗಳು, ಮಹಿಳೆಯರು ಹಾಗೂ ಜೆಸ್ಕಾಂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 