ಮುಂಡಗೋಡ 11: ಇಲ್ಲಿಯ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರೀಶೀಲನಾ ಸಮಿತಿಯ ಸಭೆಯು ಬುಧವಾರ ಜರುಗಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್ ಆರ್ ಪಾಟೀಲ್ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳೆರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ. ಹಾಗೂ ಬಸ್ ಚಾಲಕರು ನಿರ್ವಾಹಕರು ಮಹಿಳಾ ಪ್ರಯಾಣಿಕರ ಜೊತೆ ಸೌಜನ್ಯದಿಂದ್ ವರ್ತಿಸಬೇಕು ಎಂದು ಎಸ್ ಆರ್ ಪಾಟೀಲ್ ರವರು ಹೇಳಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷರಾದ ಸತೀಶ್ ನಾಯ್ಕ್ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಟಿ. ವೈ ದಾಸನಕೊಪ್ಪ ತಾಲೂಕ ಅಧ್ಯಕ್ಷರು ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.