ಕುರಿಗಾಹಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸಿಕೊಡಲು ಗುಡದಪ್ಪ ಮನವಿ
Gudadappa appeals to provide government facilities to shepherds
ಕುರಿಗಾಹಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸಿಕೊಡಲು ಗುಡದಪ್ಪ ಮನವಿ
ಕೊಪ್ಪಳ 05: ಕುರಿಗಾರರಿಗೆ ಈ ಹಿಂದೆ ನೀಡಲಾಗಿದ್ದ ಅಮೃತ ಯೋಜನೆ, ಪುನಃ ಜಾರಿ ಮಾಡಬೇಕು ಕುರಿಗಳಿಗೆ ಓಷಧಿ ಸರಿಯಾದ ರೀತಿಯಲ್ಲಿ ಸಿಗುತ್ತಿಲ್ಲ ಇದರಿಂದ ಕುರಿಗಾಹಿಗಳಿಗೆ ಸಾಕಷ್ಟು ತೊಂದರೆ ಮತ್ತು ನಷ್ಟ ಉಂಟಾಗುತ್ತಿದೆ ಕೂಡಲೇ ಸರ್ಕಾರ ಕುರಿಗಾಹಿಗಳಿಗೆ ಸಿಗುವಂತಹ ನ್ಯಾಯ ಸಮ್ಮತವಾದಂತ ಸೌಲಭ್ಯಗಳನ್ನು ನೀಡಬೇಕೆಂದು ಸರಕಾರಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಲೂಕಿನ ಹಲಗೇರಿ ಗ್ರಾಮದ ಮುಖಂಡ ಹಾಗೂ ಶ್ರೀ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಡದಪ್ಪ ಬಾನಪ್ಪನವರ್ ಹಲಗೇರಿ ಸರ್ಕಾರಕ್ಕೆ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ,ಈ ಕುರಿತು ಹೇಳಿಕೆ ನೀಡಿದ ಅವರು ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ಸಮರ್ಕವಾಗಿ ವಿತರಿಸಬೇಕು ,ಅಲ್ಲದೇ ಈಗ ನಡೆಯುತ್ತಿರುವ ಗಣತಿ ಸಮೀಕ್ಷಾ ಕಾರ್ಯ ಕ್ರಮಬದ್ಧವಾಗಿ ನಡೆಯಬೇಕು ಅದಕ್ಕೆ ಸಂಬಂಧಿಸಿದ ನೌಕರರಿಗೆ ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಜಾರಿಗೊಳಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದರು, ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಇತರ ಸಚಿವರಿಗೆ, ನಾವುಗಳು ಡೊಳ್ಳು ಬಾರಿಸುವುದರ ಮೂಲಕ ಅವರಿಗೆ ಅದ್ದೂರಿಯಾಗಿ ಸ್ವಾಗತಿಸುತ್ತೇವೆ ಎಂದು ಗುಡದಪ್ಪ ಬಾನಪ್ಪ ನವರ ಹಲಿಗೇರಿ ತಿಳಿಸಿದ್ದಾರೆ ,
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 