ಹಡಪದ ಅಪ್ಪಣ್ಣನವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಗುಡ್ಡಪ್ಪ ಹಡಪದ ಶರಣಪ್ಪ ಹಡಪದ ಕರೆ
Guddappa Hadapada and Sharanappa Hadapada call for the grand celebration of Hadapada Appanna's Jayan
ಲಕ್ಷ್ಮೇಶ್ವರ" 25 : ಇದೇ 29ರಂದು ಜರಗುವ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಮಾಜ ಬಾಂಧವರಿಗೆ ಕರೆ ನೀಡಿದ ಲಕ್ಷ್ಮೇಶ್ವರ ಶಿರಹಟ್ಟಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷರಾದ ಗುಡ್ಡಪ್ಪ ಹಡಪದ ಶರಣಪ್ಪ ಹಡಪದ ರವರು ಮಾತನಾಡಿಹಡಪದ ಅಪ್ಪಣ್ಣ ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ್ರ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜು ಗರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕೈಗನ್ನಡಿ ಯಾಗಿದೆ ಎಂದರೆ ತಪ್ಪಾಗಲಾರದು.
ಅಂದು ಹಡಪದ ಸಮಾಜದವರು ಬೆಳಿಗ್ಗೆ ಎದರುಗಡೆ ಬಂದರೆ ಏನೋ ಆಗುತ್ತದೆ ಎಂಬ ಮೂಢ ನಂಬಿಕೆಯನ್ನು ಹೋಗಲಾಡಿಸುವುದಕ್ಕಾಗಿಯೆ ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ ಇವರ ಧರ್ಮಪತ್ನಿ ಲಿಂಗಮ್ಮನವರೂ ಸಹ ಮಹಾನ್ ವಚನ ಗಾರ್ತಿಯಾಗಿದ್ದರು ಇವರ ಊರು ವಿಜಯಪುರ ಜಿಲ್ಲೆಯ ತಂಗಡಗಿಯಾಗಿರುತ್ತದೆ ಅಲ್ಲಿಯೆ ಇವರ ಸಮಾಧಿಯೂ ಸಹ ಇದೆ. ಇವರು ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ.
ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಆಪ್ಪಣ್ಣನವರು ಒಂದು ಉತ್ತಮ ಉದಾಹರಣೆಯಾಗಿರುತ್ತಾರೆ. ಇವರ ಜೀವನದ ಬಗ್ಗೆ ಸಮಾಜ ಬಾಂಧವರು ತಿಳಿದುಕೊಳ್ಳಬೇಕು ಅಂತ ಮಹಾಶರಣರ ಜಯಂತಿಯನ್ನುಇದೇ 29ರಂದು ಕಡ್ಲಿಗಡಬನ ಹುಣ್ಣಿಮೆ ದಿನದಂದು ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮತ್ತು ಎಲ್ಲಾ ಸರಕಾರಿ ಶಾಲಾ ಕಾಲೇಜು ಕಚೇರಿಗಳಲ್ಲಿ ಆಚರಿಸಲ ಸಿದ್ಧತೆಗಳು ನಡೆದಿದ್ದು ಸಮಾಜ ಬಾಂಧವರು ಹಡಪದ ಅಪ್ಪಣ್ಣನವರ ಜಯಂತಿಯಲ್ಲಿ ಭಾಗವಹಿಸಿ ಅದ್ದೂರಿಯಾಗಿ ಆಚರಿಸಬೇಕೆಂದು ಕರೆ ನೀಡಿದ್ದಾರೆ.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 