ಗುಜರಾತ್ ಅಂತಾರಾಷ್ಟ್ರೀಯ ಗಡಿ ಮೂಲಕ ನುಸುಳಲು ಯತ್ನಿಸಿದ ಪಾಕ್ ಪ್ರಜೆಯ ಬಂಧನ
ಭೂಜ್, ಫೆ.11,ಗುಜರಾತ್‌ನ ಕಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ (ಐಬಿ) ಮೂಲಕ ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ಪ್ರಜೆಯೊಬ್ಬನನ್ನು ಗಡಿಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಒಳನುಸುಳುಕೋರನನ್ನು ಪಾಕಿಸ್ತಾನದ ಕರಾಚಿಯ ಉತ್ತರದಲ್ಲಿರುವ ಶಹನಾವಾಜ್ ಭುಟ್ಟೋ ವಸಾಹತು ನಿವಾಸಿ ಅಹ್ಮದ್ ದಿಲಾವರ್ ಖಾನ್ (38) ಎಂದು ಗುರುತಿಸಲಾಗಿದೆ. ಕಚ್ ಜಿಲ್ಲೆಯ ರಾಪರ್ ತಾಲ್ಲೂಕಿನ ಬಾಲಸರ್ ಪೊಲೀಸ್ ಠಾಣೆ ವ್ಯಾಪ್ತಿಯ ವಾಗಡ್ ಪ್ರದೇಶಕ್ಕೆ ಸಮೀಪವಿರುವ ಗಡಿ ಸ್ತಂಭದ ಬಳಿ ಗಸ್ತು ತಿರುಗುತ್ತಿದ್ದ ತಂಡ ಆತನನ್ನು ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆತನನ್ನು ಬಾಲಸರ್ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಬಂಧಿತ ಪಾಕಿಸ್ತಾನ ಪ್ರಜೆಯ ಬಗ್ಗೆ ವಿವರವಾದ ವಿಚಾರಣೆ ಜಂಟಿ ವಿಚಾರಣಾ ಕೇಂದ್ರದಲ್ಲಿ ಮಾಡಲಾಗುವುದು ಎಂದು ಬಾಲಸರ್ ಪೊಲೀಸ್ ಠಾಣೆಯ ಪಿಐ ಬಿ.ಜೆ.ಪಾರ್ಮರ್ ತಿಳಿಸಿದ್ದಾರೆ. ನುಸುಳುಕೋರನಿಂದ ಪಡೆದ ಮಾಹಿತಿಯನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 