ಗುಮ್ಮಟ ನಗರಿ ಹಸಿರು ನಗರಿಯಾಗಿ ಕಂಗೊಳಿಸಬೇಕು: ಇನಾಮದಾರ
Gumta Nagar should be transformed into a green city: Inamdara
ವಿಜಯಪುರ 21: ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪಿಡಿಜೆ ಮಹಾವಿದ್ಯಾಲಯದಲ್ಲಿ ವನಮಹೋತ್ಸವ ಆಚರಿಸಿ ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಾಲಿಕೆ ಸದಸ್ಯ ಕೈಸರ ಇನಾಮದಾರ ಮಾತನಾಡಿ, ವಿಜಯಪುರ ಐತಿಹಾಸಿಕ ನಗರಿ, ಈ ನಗರಿ ಹಸಿರು ನಗರಿಯಾಗಿ ಕಂಗೊಳಿಸಬೇಕು, ಸಸಿಗಳನ್ನು ನೆಟ್ಟು ಸೂಕ್ತ ರೀತಿಯಲ್ಲಿ ಪೋಷಿಸಿದರೆ ಗುಮ್ಮಟ ನಗರಿ ಶೀಘ್ರವೇ ಹಸಿರು ನಗರಿಯಾಗಲಿದೆ, ಪ್ರತಿಯೊಬ್ಬರು ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಪಶು ಸಂಗೋಪನಾ ಇಲಾಖೆಯ ವಿಶ್ರಾಂತ ಉಪನಿರ್ದೇಶಕ ಡಾ.ಪ್ರಾಣೇಶ ಜಹಾಗೀರದಾರ ಮಾತನಾಡಿ, ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ, ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಬೇಕಿದೆ, ನಿವೃತ್ತ ಬ್ಯಾಂಕ್ ನೌಕರರು ಪರಿಸರ ರಕ್ಷಣೆಯ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ ಮಾತನಾಡಿ, ಸಚಿವ ಡಾ.ಎಂ.ಬಿ. ಪಾಟೀಲರ ಮಹತ್ವಾಕಾಂಕ್ಷೆಯೊಂದಿಗೆ ಕೋಟಿ ಸಸಿಗಳನ್ನು ನೆಡುವ ಸಂಕಲ್ಪ ಸಾಕಾರ ರೂಪದಲ್ಲಿದ್ದು, ಅರಣ್ಯ ಭೂಮಿ ಹೆಚ್ಚುತ್ತಿದೆ ಎಂದರು.
ವಿಠ್ಠಲ ಕಾಳೆ ಅಧ್ಯಕ್ಷತೆ ವಹಿಸಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಬು ಚವ್ಹಾಣ, ಬಿಡಿಇ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಪಿ. ಚಿಕ್ಕಲಕಿ, ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಪದಾಧಿಕಾರಿಗಳಾದ ವಿಶ್ವನಾಥ ನಾಯಕ, ಎಂ.ಎಸ್. ಭಟ್, ಅಜಯಕುಮಾರ, ಬಿ. ನವೀನಕುಮಾರ, ಸುಹಾಸ ದೇಶಪಾಂಡೆ, ಮಲ್ಲಿಕಾರ್ಜುನ ಮದನೂರ, ಜಯರಾಮ, ಅಶೋಕ ಉಪಾಧ್ಯಾಯ, ಪುರಾಣಿಕ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 