ಗಂದೇರ್ಬಾಲ್ನಲ್ಲಿ ಗುಂಡಿಕ ಚಕಮಕಿ: ಇಬ್ಬರು ಉಗ್ರರು ಹತ

ಶ್ರೀನಗರ, ನ.12 :      ಕೇಂದ್ರ ಕಾಶ್ಮೀರದ ಗಂದೇರ್ಬಾಲ್ನಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ.ಉಗ್ರಗಾಮಿಗಳು ಅಡಗಿರುವ ಬಗ್ಗೆ ಸುಳಿವು ದೊರೆತ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣೆ ಪಡೆ, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಇಂದು ಮುಂಜಾನೆ ಗಂದರ್ಬಾಲ್ನ ಕುಲಂಗುಂಡ್ ಗ್ರಾಮದಲ್ಲಿ  ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.  ಆದಾಗ್ಯೂ, ಭದ್ರತಾ ಪಡೆಗಳು ಗ್ರಾಮದ ಒಂದು ನಿರ್ದಿಷ್ಟ ಪ್ರದೇಶವನ್ನು ಸುತ್ತುವರಿದಾಗ ಅಲ್ಲಿ ಅಡಗಿಕೊಂಡಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು, ಆಗ ಭದ್ರತಾ ಪಡೆಗಳು ಕೂಡ ಪ್ರತಿ ದಾಳಿ ನಡೆಸಿವೆ. ಇದುವರೆಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅಲ್ಲಿಂದ ಕೊನೆಯ ಬಾರಿಗೆ ವರದಿ ಬಂದಾಗ ಸ್ಥಳದಲ್ಲಿ ಗುಂಡಿನ ಚಕಮಕಿ ನಡೆಯುತ್ತಿತ್ತು. ಪ್ರದೇಶದಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಯದಂತೆ ತಡೆಯಲು ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆಸಲಾಗಿದೆ.