ಮಂಗಳೂರು .25 ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್ ಮ್ಯಾನ್ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ. ಮಾಜಿ ಸಚಿವ ಯು. ಟಿ. ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಖಾದರ್ ಪ್ರಸ್ತುತ ಹುಣಸೂರು ವಿಧಾನಸಭೆಯ ಉಪಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದು, ಭದ್ರತೆಯನ್ನು ಅಲ್ಲಿಂದಲೇ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.