ಕಾಗಿನೆಲೆಯಲ್ಲಿ ಗುರು ಪೂರ್ಣಿಮಾ ಮಹೋತ್ಸವ: ಪೂರ್ವಭಾವಿ ಸಭೆ
Guru Purnima Festival at Kaginele: Preparatory Meeting
ಲೋಕದರ್ಶನ ವರದಿ
ಹಾವೇರಿ 19: ಕಾಗಿನೆಲೆಯ ಶ್ರೀಮಠದಲ್ಲಿ ಜುಲೈ 29ರಂದು ನಡೆಯಲಿರುವ ಗುರು ಪೂರ್ಣಿಮಾ ಮಹೋತ್ಸವ ಹಾಗೂ ಬ್ರಹ್ಮಲೀನ ಜಗದ್ಗುರು ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕಾನಂದ ಪುರಿ ಸ್ವಾಮೀಜಿಗಳ ಪುಣ್ಯಾರಾಧನೆ ಅಂಗವಾಗಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು. ಅಮೋಘ ಸಿದ್ಧೇಶ್ವರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದ ಸ್ವಾಮೀಜಿಗಳು, ಗುರು ಪೂರ್ಣಿಮೆಯು ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರ ದಿನವಾಗಿದ್ದು, ಸಮಾಜದ ಎಲ್ಲ ವರ್ಗಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ಬಾರಿಯ ಗುರು ಪೂರ್ಣಿಮಾ ಮಹೋತ್ಸವದ ಸಂಪೂರ್ಣ ಜವಾಬ್ದಾರಿಯನ್ನು ಚಿತ್ರದುರ್ಗ ಜಿಲ್ಲೆಯ ಭಕ್ತರು ವಹಿಸಿಕೊಂಡಿದ್ದು, ಭಕ್ತರ ಆಗಮನ, ಅನ್ನಸಂತರೆ್ಣ, ಪೂಜಾ ವಿಧಿವಿಧಾನಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವ್ಯವಸ್ಥೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲೆಯ ಎಲ್ಲ ಭಕ್ತರು, ಕುರುಬ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಕಾಗಿನೆಲೆಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆಯುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಶ್ರೀಮಠದ ಧರ್ಮದರ್ಶಿ ಎಸ್.ಎಫ್.ಎನ್. ಗಾಜಿಗೌಡ್ರ, ರಾಜೇಂದ್ರ ಹಾವೇರಣ್ಣನವರ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ನಾಗರಾಜ ಅಣ್ವೇರಿ, ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಗಾಜಿಗೌಡ್ರ, ಜಿಲ್ಲಾ ಉಪಾಧ್ಯಕ್ಷ ಅಶೋಕ ಬಣಕಾರ, ಚೋಳಪ್ಪ ಕಸವಳ ಸೇರಿದಂತೆ ಜಿಲ್ಲೆಯ ಎಂಟು ತಾಲೂಕುಗಳ ಕುರುಬ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖ ಭಕ್ತರು ಭಾಗವಹಿಸಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 