ಶಿಗ್ಗಾವಿ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರುಪೂರ್ಣಿಮಾ ಮಹೋತ್ಸವ

ಶಿಗ್ಗಾವಿ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರುಪೂರ್ಣಿಮಾ ಮಹೋತ್ಸವ  Guru Purnima Festival at Shiggaon Sri Shirdi Sai Mandir

ಶಿಗ್ಗಾವಿ 27: ಪಟ್ಟಣದ ಸಾಯಿ ನಗರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಜೂನ್ 29ರಂದು ಬುಧವಾರ ಗುರುಪೂರ್ಣಿಮಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.  ಮಹೋತ್ಸವದ ಅಂಗವಾಗಿ ಮಂದಿರದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಮಧ್ಯಾಹ್ನ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ ತಿಳಿಸಿದೆ.  ಎಲ್ಲಾ ಸಾಯಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಮಹಾಪ್ರಸಾದ ಸ್ವೀಕರಿಸಿ ಪುನೀತರಾಗಬೇಕು ಎಂದು ಮಂಡಳಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.