ಅಮ್ಮಿನಬಾವಿಯಲ್ಲಿ ಗುರುಪೂರ್ಣಿಮೆ:ಶ್ರೀಗಳ ಪಾದಪೂಜೆ ಗೌರವಾರ್ಪಣೆ
Guru Purnima at Amminabavi
ಧಾರವಾಡ 11 : ಗುರುಪೂರ್ಣಿಮೆಯ ಅಂಗವಾಗಿ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದ ಸಕಲ ಸದ್ಭಕ್ತರು ಉಭಯ ಶಿವಾಚಾರ್ಯ ಶ್ರೀಗಳನ್ನು ಸಾಮೂಹಿಕವಾಗಿ ಶಾಲುಹೊದಿಸಿ, ಫಲಪುಷ್ಪ ತಾಂಬೂಲದೊಂದಿಗೆ ಗೌರವಿಸಿ ಆಶೀರ್ವಾದ ಪಡೆದರು.
ಅಮ್ಮಿನಬಾವಿ ಗ್ರಾಮದ ವಿವಿಧ ಓಣಿಗಳ ಭಕ್ತರಲ್ಲದೇ ಹುಬ್ಬಳ್ಳಿ, ಧಾರವಾಡ, ಮರೇವಾಡ, ಕರಡಿಗುಡ್ಡ ಮತ್ತು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟೆ ತಾಲೂಕಿನ ದುಂಡಗಿ ಗ್ರಾಮದ ನೂರಾರು ಸದ್ಭಕ್ತರು ಮಠಕ್ಕೆ ಆಗಮಿಸಿ ಉಭಯ ಶ್ರೀಗಳಿಗೆ ಗುರುಪೂರ್ಣಿಮೆಯ ಗೌರವ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 