ಸತ್ಸಂಗದ ದಾರಿ ತೋರಿಸುವವನೇ ಗುರು: ಶ್ರೀಗಳು
Guru is the one who shows the path to Satsang: Sri
ವರದಿ: ಅಡಿವೇಶ ಮುಧೋಳ.
ಬೆಟಗೇರಿ 27: ಮನುಷ್ಯ ಜನ್ಮ ಶ್ರೇಷ್ಠವಾಗಿದೆ. ಒಳ್ಳೆಯವನಾಗಿ ಒಳ್ಳೆಯ ಕಾಯಕ ಮಾಡಿ, ಭಗವಂತನ ನಾಮಸ್ಮರಣೆ ಮಾಡಿದರೆ ಅದೇ ಸತ್ಸಂಗ. ಎಲ್ಲವನ್ನು ನಮಗೆ ಕೂಟ್ಟ ಭಗವಂತನನ್ನು ಎಂದಿಗೂ ಮರೆಯಬಾರದು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರೆ್ಣ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ್ರ್ರಥಮವಾಗಿ ಇದೇ ಏ.26ರಿಂದ ಏ.30ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಹಮ್ಮಿಕೊಂಡ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಏ.26ರಂದು ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ನಡೆದ ಪ್ರವಚನದಲ್ಲಿ ಮಾತನಾಡಿದ ಅವರು, ಸದ್ಗುರು ಯಾವಾಗಲೂ ದೊಡ್ಡವನು, ಗುರು ಸತ್ಸಂಗದ ದಾರಿ ತೋರಿಸುತ್ತಾನೆ ಎಂದರು.
ಗುರುವಿನ ಗುಲಾಮನಾಗುವ ತನಕ ದೊರೆಯದನ್ನ ಮುಕುತಿ. ಸದ್ಗುರುವಿನ ಉಪದೇಶ ಕೇಳಬೇಕು. ಗುರುವಿನ ಸೇವೆ ಮಾಡಬೇಕು. ಹರ ಮುನಿದರೂ ಸಹ ಗುರು ಕಾಯುತ್ತಾನೆ. ಒಳ್ಳೆಯ ಮನಸ್ಸಿನಿಂದ ಶಿವನಾಮಸ್ಮರಣೆ ಮಾಡಿದರೆ ಭಗವಂತನ ಕೃಪೆಗೆ ಪಾತ್ರರಾಗುತ್ತಾರೆ. ಹಲವಾರು ಜನ ಮಹಾನ್ ಯೋಗಿಗಳು, ಸತ್ಪುರುಷರು, ಹರ, ಗುರು, ಚರಮೂರ್ತಿಗಳು ಈ ಬೆಟಗೇರಿ ನೆಲದಲ್ಲಿ ಪಾದಸ್ಪರ್ಶ ಮಾಡಿದ್ದರಿಂದ ಇಲ್ಲಿ ಸದಾ ಆಧ್ಯಾತ್ಮದ ಕಂಪು ಸೂಸುತ್ತಿದೆ. ಇಲ್ಲಿ ಜರುಗುವ ಹಲವಾರು ಧಾರ್ಮಿಕ ಕಾರ್ಯಗಳಿಗೆ ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರ ಮೆಚ್ಚುವಂತದ್ದಾಗಿದೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಅಭಿಪ್ರಾಯ ಪಟ್ಟರು.
ಏ.26 ರಂದು ಸಾಯಂಕಾಲ 5 ಗಂಟೆಗೆ ಸ್ಥಳೀಯ ಅಡವಿಸಿದ್ಧೇಶ್ವರ ದೇವಸ್ಥಾನದಿಂದ ಶ್ರೀ ಗಜಾನನ ವೇದಿಕೆ ತನಕ ಸುಮಂಗಲೆಯರಿಂದ ಆರತಿ ಮತ್ತು ಕುಂಭಮೇಳ, ಸಕಲ ವಾಧ್ಯಮೇಳಗಳೊಂದಿಗೆ ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಅವರ ಸ್ವಾಗತ ಮೆರವಣಿಗೆ ಜರುಗಿತು.
ಮಲ್ಲಿಕಾರ್ಜುನ ಕೊಡಗನೂರ ಅವರಿಂದ ತಬಲಾ ಸಾಥದೊಂದಿಗೆ ಕಲ್ಲೂರದ ಶಂಕರಯ್ಯ ಗುರುಮಠ ಅವರಿಂದ ಸಂಗೀತ ಸೇವೆ, ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ ಪ್ರವಚನ ನಡೆದ ಬಳಿಕ ಅನ್ನದಾತ ನೇಗಿಲಯೋಗಿ ಮತ್ತು ದೇಶ ಕಾಯುವ ಸೈನಿಕರಿಗೆ ದೇವರು ಸದಾ ಶಕ್ತಿ ಸಾಮರ್ಥ್ಯ ನೀಡಲಿ ಎಂದು ಒಂದು ನಿಮೀಷ ಮೌನ ಧ್ಯಾನ ಮಾಡಲಾಯಿತು.
ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಪ್ರವಚನ : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಏ.28 ಮತ್ತು ಏ.29 ರಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ ಪ್ರತಿ ದಿನ ಸಾಯಂಕಾಲ 7 ಗಂಟೆಯಿಂದ 8 ಗಂಟೆಯವರೆಗೆ ವಿವಿಧ ವಿಷಯಗಳ ಮೇಲೆ ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಪ್ರವಚನ, ಏ.30 ರಂದು ಪ್ರವಚನ ಮಂಗಲ ಕಾರ್ಯಕ್ರಮ, ಮುಂಜಾನೆ 8 ಗಂಟೆಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಬಳಗಾನೂರದ ಶಿವಶಾಂತವೀರ ಶರಣರಿಂದ ಶಿವಭಜನೆ ಮೂಲಕ ಪಾದಯಾತ್ರೆ, ಮುಂಜಾನೆ 10 ಗಂಟೆಗೆ ಕೊಪ್ಪಳ ಗವಿಸಿದ್ಧೇಶ್ವರ ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಆಧ್ಯಾತ್ಮಿಕ ಪ್ರವಚನ ಜರುಗಲಿದೆ ಎಂದು ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳ ಪ್ರವಚನ ಆಯೋಜನೆ ಸ್ಥಳೀಯ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಬಸವಂತ ಕೋಣಿ, ಈಶ್ವರ ಬಳಿಗಾರ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಎಂ.ಐ.ನೀಲಣ್ಣವರ, ದುಂಡಪ್ಪ ಮಾಳೇದ, ಮಲ್ಲಪ್ಪ ಪಣದಿ, ಬಾಳಪ್ಪ ಕನೋಜಿ, ನಿಂಗಪ್ಪ ಕಂಬಿ, ದುಂಡಪ್ಪ ಕಂಬಿ, ಯಲ್ಲಪ್ಪ ಮೇಳೆಣ್ಣವರ, ಸುರೇಶ ನೀಲಣ್ಣವರ, ಭೀಮನಾಯ್ಕ ನಾಯಕರ, ಭರಮಣ್ಣ ಪೂಜೇರ, ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತ, ಶರಣರು, ಕೊಪ್ಪಳ ಮತ್ತು ಹೊಸಳ್ಳಿ ಶ್ರೀಗಳ ಪ್ರವಚನ ಆಯೋಜನೆ ಸಮಿತಿ ಪದಾಧಿಕಾರಿಗಳು, ಸದಸ್ಯರು, ಅಪಾರ ಸಂಖ್ಯೆಯಲ್ಲಿ ಭಕ್ತ ಜನ ಸಮೂಹ ಈ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 