ಗದಗ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಗುರುನಗೌಡ ಪಾಟೀಲ್ ನೇಮಕ

ಗದಗ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಗುರುನಗೌಡ ಪಾಟೀಲ್ ನೇಮಕ  Gurunagouda Patil appointed as Coordinator of the Gadag Block Congress Committee


ಶಿಗ್ಗಾವಿ 04:   ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಸಂಯೋಜಕರ ಸಭೆಯಲ್ಲಿ ಚರ್ಚಿಸಿದಂತೆ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸಂಯೋಜಕರನ್ನು ನೇಮಕ ಮಾಡಲಾಗಿದೆ.  

ಈ ಹಿನ್ನೆಲೆಯಲ್ಲಿ ಗದಗ ತಾಲೂಕಿಗೆ ಗುರುನಗೌಡ ಪಾಟೀಲ್ ಅವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ.  ಸಂಯೋಜಕರು ಸಂಬಂಧಪಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಖುದ್ದಾಗಿ ಭೇಟಿ ನೀಡಿ, ಬಿಎಲ್‌ಎ-2 ಗಳೊಂದಿಗೆ ಚರ್ಚಿಸಿ ಕಾರ್ಯನಿರ್ವಹಿಸಬೇಕು.

ಗೈರುಹಾಜರಾದ ಹಾಗೂ ಸ್ಥಳಾಂತರಗೊಂಡಿರುವ ಮತದಾರರನ್ನು ಗುರುತಿಸಿ, ಅಗತ್ಯವಿರುವವರಿಗೆ ಎನ್ಯುಎಂ  ಅರ್ಜಿ ಅಥವಾ ಫಾರಂ-6 ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.  

ಅಲ್ಲದೆ, ಸಂಬಂಧಪಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬಿಸಿಸಿ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಬಿಎಲ್‌ಎ-2ಗಳನ್ನು ಸಂಪರ್ಕಿಸಿ, ಕೈಗೊಂಡಿರುವ ಕಾರ್ಯಗಳ ಕುರಿತು ವರದಿಯನ್ನು ಕೆಪಿಸಿಸಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.