ಗದಗ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಗುರುನಗೌಡ ಪಾಟೀಲ್ ನೇಮಕ
Gurunagouda Patil appointed as Coordinator of the Gadag Block Congress Committee
ಶಿಗ್ಗಾವಿ 04: ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಸಂಯೋಜಕರ ಸಭೆಯಲ್ಲಿ ಚರ್ಚಿಸಿದಂತೆ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸಂಯೋಜಕರನ್ನು ನೇಮಕ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಗದಗ ತಾಲೂಕಿಗೆ ಗುರುನಗೌಡ ಪಾಟೀಲ್ ಅವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಸಂಯೋಜಕರು ಸಂಬಂಧಪಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಖುದ್ದಾಗಿ ಭೇಟಿ ನೀಡಿ, ಬಿಎಲ್ಎ-2 ಗಳೊಂದಿಗೆ ಚರ್ಚಿಸಿ ಕಾರ್ಯನಿರ್ವಹಿಸಬೇಕು.
ಗೈರುಹಾಜರಾದ ಹಾಗೂ ಸ್ಥಳಾಂತರಗೊಂಡಿರುವ ಮತದಾರರನ್ನು ಗುರುತಿಸಿ, ಅಗತ್ಯವಿರುವವರಿಗೆ ಎನ್ಯುಎಂ ಅರ್ಜಿ ಅಥವಾ ಫಾರಂ-6 ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಅಲ್ಲದೆ, ಸಂಬಂಧಪಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬಿಸಿಸಿ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಬಿಎಲ್ಎ-2ಗಳನ್ನು ಸಂಪರ್ಕಿಸಿ, ಕೈಗೊಂಡಿರುವ ಕಾರ್ಯಗಳ ಕುರಿತು ವರದಿಯನ್ನು ಕೆಪಿಸಿಸಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 