ಗುರುನಾಥ ಮುರಡಿ ಬಸವಚೇತನ ಪ್ರಶಸ್ತಿಗೆ ಆಯ್ಕೆ
Gurunath Muradi selected for Basavachetana Award
ದೇವರಹಿಪ್ಪರಗಿ 03: ತಾಲೂಕಿನ ಪಡಗಾನೂರ ಗ್ರಾಮದ ಜಾನಪದ ಕಲಾವಿದ ಗುರುನಾಥ ಮುರಡಿ ಅವರನ್ನು ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 06 ರಂದು ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಜಾನಪದ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಹಾಡಕಿ ಡೊಳ್ಳಿನ ಪದಗಳ ಮೂಲಕ ರಾಜ್ಯಾದ್ಯಂತ ಹೆಸರುವಾಸಿ ಆಗಿರುವ ಗುರುನಾಥ ಮುರಡಿ ಅವರು ಹಲವು ವರ್ಷಗಳಿಂದ ಜಾನಪದ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ, ಎಲೆಮರೆ ಕಾಯಿಯಂತೆ ಸಮಾಜಮುಖಿಯಾಗಿರುವ ತಮಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲು ಹೆಮ್ಮೆ ಎನಿಸುತ್ತಿದೆ ಎಂದು ಅಮ್ಮ ಫೌಂಡೇಶನ್ ಸಂಚಾಲಕರಾದ ಕಬೂಲ್ ಕೊಕಟನೂರ ತಿಳಿಸಿದ್ದಾರೆ.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ನಾಡಿನ ಶ್ರೇಷ್ಠ ಸಾಹಿತಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಬಸವ ಚಿಂತಕರ ಸಮುಖದಲ್ಲಿ ಕಾರ್ಯಕ್ರಮ ಜರುಗಲಿದೆ. ತಾವು ತಮ್ಮ ಹಿತೈಸಿ ಬಳಗದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಶಸ್ತಿ ಸ್ವೀಕರಿಸಲು ಕೋರುತ್ತೇವೆ ಎಂದು ಅಮ್ಮ ಫೌಂಡೇಶನ್ ವತಿಯಿಂದ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 