ರಾಯಣ್ಣನ ಹುತಾತ್ಮ ದಿನ ಮನೆಗಳಲ್ಲಿ ದೀಪ ಬೆಳಗಿಸಿ: ಗುರುನಾಥ ಕರೆ
Gurunath calls for lighting lamps in homes on Rayanna's martyrdom day
ದೇವರಹಿಪ್ಪರಗಿ 23: ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನದಂದು ದೀಪ ಬೆಳಗಿಸುವ ಮೂಲಕ ಅವರ ತ್ಯಾಗ, ಶೌರ್ಯ ಹಾಗೂ ಆದರ್ಶಗಳನ್ನು ಸ್ಮರಿಸುವಂತೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಗುರುನಾಥ ಮುರಡಿ ಕರೆ ನೀಡಿದ್ದಾರೆ.ಶುಕ್ರವಾರದಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅಗಸ್ಟ್ 15ರಂದು ಅವರ ಜನ್ಮದಿನ ಹಾಗೂ ಜನವರಿ 26ರಂದು ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನ ಎರಡು ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅವರ ಫೋಟೋ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ದೇಶದ ಸ್ವಾತಂತ್ರ್ಯಕ್ಕಾಗಿ ರಾಯಣ್ಣನ ಜೊತೆ ಆರು ಜನ ವೀರ ಮರಣ ಹೊಂದಿದ್ದಾರೆ, ಜನವರಿ 26ರ ಅವರು ಹುತಾತ್ಮ ದಿನವಾಗಿದ್ದು, ದೇಶ ಪ್ರೇಮದ ಸಂಕೇತವಾಗಿ ನಮ್ಮೆಲ್ಲರ ಹೃದಯದಲ್ಲಿ ರಾಯಣ್ಣ ಅಜರಾಮರಾಗಿದ್ದು ಅವರ ಸ್ಮರಣೆಗಾಗಿ ಪ್ರತಿಯೊಬ್ಬರ ಮನೆಗಳಲ್ಲಿ ದೀಪ ಬೆಳಗಿಸುವುದರಿಂದ ಮಕ್ಕಳಿಗೆ ರಾಯಣ್ಣನ ವೀರಗಾಥೆಗಳನ್ನು ತಿಳಿಸುವ ಮೂಲಕ ಅವರಂತೆ ದೇಶ ಪ್ರೇಮಿಗಳಾಗಲು ಸ್ಪೂರ್ತಿ ನೀಡಬೇಕಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ಅರ್ಿಸಿದ ರಾಯಣ್ಣನಿಗೆ ಗೌರವ ಸಲ್ಲಿಸಲು ಪ್ರತಿಯೊಬ್ಬರ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನದಂದು ರಾಯಣ್ಣನಿಗೆ ನಮನ ಸಲ್ಲಿಸಿ ಮಹಾನ್ ವೀರನ ತ್ಯಾಗವನ್ನು ಈ ಬಾರಿ ವಿಶಿಷ್ಟವಾಗಿ ಸ್ಮರಿಸೋಣ ಎಂದು ಕರೆ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 