ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಡೆಪ್ಪ ಅವಿರೋದ ಆಯ್ಕೆ
H. Jadeppa Aviroda elected as the new General Secretary of the Teachers' Association
ಲೋಕದರ್ಶನ ವರದಿ
ಕಂಪ್ಲಿ 11 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ತಾಲೂಕು ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಡೆಪ್ಪ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಂತರ ನೂತನ ಪ್ರಧಾನ ಕಾರ್ಯದರ್ಶಿ ಹೆಚ್.ಜಡೆಪ್ಪ ಮಾತನಾಡಿ, ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆಯಲ್ಲಿ ಸದಸ್ಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ನಂತರ ನೂತನ ಪದಾಧಿಕಾರಿಗಳ ಸ್ಥಾನದಲ್ಲಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನಮ್ಮನ್ನು ಆಯ್ಕೆ ಮಾಡಿರುವುದು ಖುಷಿ ತಂದಿದೆ. ಇದರಿಂದ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದ್ದು, ಶಿಕ್ಷಕರ ಸಹಕಾರದೊಂದಿಗೆ ಪ್ರೀತಿ, ವಿಶ್ವಾಸದ ಮೂಲಕ ಸಂಘದ ಅಭಿವೃದ್ಧಿ ಜೊತೆಗೆ ಶಿಕ್ಷಕರ ಬೇಡಿಕೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು. ನೂತನ ತಾಲೂಕು ಅಧ್ಯಕ್ಷ ಹನುಮಂತಪ್ಪ, ಖಜಾಂಚಿ ಐ.ಗಂಗಮ್ಮ ಹಾಗೂ ಸಹ ಶಿಕ್ಷಕ ವೃಂದದವರು ಸನ್ಮಾನಿಸಿ ಗೌರವಿಸುವ ಮೂಲಕ ಅಭಿನಂದಿಸಿದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 