ಅಮರೇಶ್ವರ, ಗಂಗಿಮಡಿ ನಿವಾಸಿಗಳ ಕುಂದುಕೊರತೆ ಆಲಿಸಿದ ಎಚ್.ಕೆ. ಪಾಟೀಲ ಸೇವಾ ತಂಡ
H.K. Patil Seva Team listens to the grievances of residents of Amareshwara and Gangimadi
ಲೋಕದರ್ಶನ ವರದಿ
ಗದಗ, ಆ.29: ಅವಳಿ ನಗರವಾದ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ನಾಗರಿಕರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಎಚ್.ಕೆ. ಪಾಟೀಲ ಸೇವಾ ತಂಡ ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ.
ಇತ್ತೀಚೆಗೆ ನಡೆದ ‘ಆ.15ರಂದು ನಿಮ್ಮ ಸೇವೆಗೆ ಅವಕಾಶ ಕೊಡಿ’ ಎಂಬ ವಿನೂತನ ಕಾರ್ಯಕ್ರಮದಡಿ, ಸೇವಾ ತಂಡದವರು ನೋಂದಾಯಿಸಿಕೊಂಡಿರುವ ನಾಗರಿಕರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿರುವ ತಾಂತ್ರಿಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನಾಗರಿಕರು ತಮ್ಮ ಸಮಸ್ಯೆಗಳನ್ನು ದಾಖಲಿಸಿ ಸೇವಾ ತಂಡದ ನೆರವು ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಮಸ್ಯೆ ಎದುರಿಸುತ್ತಿರುವ ನಾಗರಿಕರು ತಮ್ಮ ಮನೆಯಿಂದಲೇ ಸೇವಾ ತಂಡದ ಸಹಾಯ ಪಡೆಯಬಹುದಾಗಿದೆ.
ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎಚ್.ಕೆ. ಪಾಟೀಲ ಸೇವಾ ತಂಡದ ಅಧ್ಯಕ್ಷ ಪ್ರಭು ಎಲ್. ಬುರುಬುರೆ ಅವರು ಆ.27ರಂದು ನಗರದ ಅಮರೇಶ್ವರ ನಗರ ಹಾಗೂ ಗಂಗಿಮಡಿ ಪ್ರದೇಶದ ನಿವಾಸಿಗಳ ಮನೆಗಳಿಗೆ ಭೇಟಿ ನೀಡಿ, ಅವರ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸೇವಾ ತಂಡದ ಕ್ಯಾಪ್ಟನ್ಗಳಾದ ಮಾರುತಿ, ಕಾತರಕಿ, ದಾದಾಪೀರ್ ಕಟ್ಟಿಮನಿ, ದಾವಲಸಾಬ್ ಮಕರಬಿ, ಆರೀಫ್ ಹೆಸರೂರು, ರಾಘವೇಂದ್ರ ಪಾಲನಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 