ಬೆಟಗೇರಿಯಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣಕ್ಕೆ ಎಚ್ ಕೆ ಪಾಟೀಲ ಶಂಕುಸ್ಥಾಪನೆ
H.K. Patil lays foundation stone for construction of new veterinary hospital in Betageri
ಬೆಟಗೇರಿಯಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣಕ್ಕೆ ಎಚ್ ಕೆ ಪಾಟೀಲ ಶಂಕುಸ್ಥಾಪನೆ
ಗದಗ 9: ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ ಅವರು ಶನಿವಾರ ಬೆಟಗೇರಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಪಶು ಸಂಪತ್ತನ್ನು ಅಧಿಕಗೊಳಿಸಿ ಅದರಿಂದ ಆರ್ಥಿಕ ಸ್ವಾವಲಂಬಿಗಳಾಗಲು ಪಶು ಆಸ್ಪತ್ರೆ ಸಹಕಾರಿಯಾಗಲಿದೆ. ಈ ಭಾಗದ ಸಾರ್ವಜನಿಕರು ಹೆಚ್ಚು ಹೆಚ್ಚು ಸದ್ಭಳಕೆ ಮಾಡಿಕೊಳ್ಳಲು ತಿಳಿಸಿದರು.ಬೆಂಗಳೂರು ಕೆಎಂಎಫ್ ನಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತದೆ. 1000 ಲೀಟರಿಗೂ ಹೆಚ್ಚು ಹಾಲು ಉತ್ಪಾದನೆ ಗುರಿಯನ್ನು ಸಾಧಿಸಿರುತ್ತದೆ. ನಮ್ಮ ಗದಗ ಬೆಟಿಗೇರಿಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ರೈತರಿಗೆ ಭರವಸೆ ಮೂಡಿಸಿದೆ ಎಂದರು. ಪಶುಪಾಲನೆಯಲ್ಲಿ ಮತ್ತು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಈ ಸಂದರ್ಭದಲ್ಲಿ ನಮ್ಮಿಂದ ಸಹಾಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಜಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಕೆ ಮಂದಾಲಿ, ಲಕ್ಷ್ಮವ್ವ ಬಜಂತ್ರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ ಎಚ್ ಬಿ ಹುಲಗನ್ನವರ, ಡಾ ಎಚ್ ವೈ ಹೊನ್ನಿ ನಾಯ್ಕರ್, ಡಾ. ಹೀರಲಾಲ ಎನ್ ಜನಗಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 