ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು: ಕೃಷ್ಣ ಎಚ್. ಹಡಪದ ಆಗ್ರಹ
H.K. Patil should be given a ministerial post: Krishna H. Hadapad demands
ಗದಗ, ಜು.09: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಜಿಲ್ಲೆಯ ಹೆಮ್ಮೆಯ ನಾಯಕರಾದ ಎಚ್.ಕೆ. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ನೀಡಬೇಕೆಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣ ಎಚ್. ಹಡಪದ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಕೇವಲ ರಾಜಕೀಯ ನಾಯಕರಲ್ಲ, ಅನುಭವಸಂಪನ್ನ ಹಾಗೂ ಜನಪರ ನಾಯಕರು. ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಎಚ್.ಕೆ. ಪಾಟೀಲ ಅವರಂತಹ ಅನುಭವಿ ನಾಯಕತ್ವ ಸರ್ಕಾರಕ್ಕೆ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ಯಾವುದೇ ವಿಳಂಬ ಮಾಡದೆ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಮಹತ್ವದ ಜವಾಬ್ದಾರಿ ನೀಡಬೇಕು. ಇದರಿಂದ ಉತ್ತರ ಕರ್ನಾಟಕ ಭಾಗದ ಜನರ ನೀರೀಕ್ಷೆಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದು ಕೃಷ್ಣ ಎಚ್. ಹಡಪದ ತಿಳಿಸಿದ್ದಾರೆ.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 