ಬೆಂಗಳೂರು 8: 21 ದಿನಗಳ ಹಿಂದೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಬಾಯಿ ವಾಲಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸೋಮವಾರ ಬೆಳಗ್ಗೆ ಏಕಾಏಕಿ ರಾಜಭವನಕ್ಕೆ ತೆರಳಿದ ಸಣ್ಣ ಕೈಗಾರಿಕೆ ಸಚಿವ ಎಚ್ ನಾಗೇಶ್ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಮೈತ್ರಿ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಲ್ಲದೆ ಮೈತ್ರಿ ಸರ್ಕಾರರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆಯುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ನನ್ನ ಬೆಂಬಲವಿದೆ ಎಂದು ರಾಜೀನಾಮೆ ಪತ್ರದಲ್ಲಿ ನಾಗೇಶ್ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ರಾಜಭವನದಿಂದ ಖಾಸಗಿ ವಾಹನದಲ್ಲಿ ನಾಗೇಶ್ ತೆರಳಿದ್ದಾರೆ. ಜೊತೆಗೆ ಇಂದು ಮುಂಬೈಗೆ ವಿಶೇಷ ವಿಮಾನದ ಮೂಲಕ ತೆರಳಿ, ಅತೃಪ್ತರ ಪಾಳಯ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರಿಗೆ ಇತ್ತೀಚೆಗಷ್ಟೇ ಸಚಿವ ಸ್ಥಾನ ನೀಡಲಾಗಿತ್ತು. ಹಲವು ದಿನಗಳ ಬಳಿಕ ಅವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ಇದೀಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತರ ಗುಂಪು ಸೇರುವ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕದಿಂದ ಬಂದ ಬಳಿಕ ತಡರಾತ್ರಿ ಸರಣಿ ಸಭೆಗಳನ್ನು ನಡೆಸಿದ್ದರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದಶರ್ಿ ಕೆ.ಸಿ ವೇಣುಗೋಪಾಲ್ ಅವರು ಎಲ್ಲಾ ಸಚಿವರ ರಾಜೀನಾಮೆ ನೀಡಲು ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಸಕರ್ಾರ ಉಳಿಯುವುದು ಕಷ್ಟ ಎಂಬುದನ್ನು ಮನಗಂಡ ನಾಗೇಶ್ ರಾಜೀನಾಮೆ ಕೊಟ್ಟಿದ್ದು, ಬಿಜೆಪಿ ಪಾಳಯ ಸೇರುವ ಸೂಚನೆ ನೀಡಿದ್ದಾರೆ. ನಾಗೇಶ್ ಅವರ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ ಪಕ್ಷೇತರ ಶಾಸಕ ಆರ್.ಶಂಕರ್ ಅವರು ಯಾವ ನಿಧರ್ಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.