ಪಂಚನದಿ ಸಚಿವಾಲಯ ಮಾಡಿ ಹೆಚ್.ಆರ್.ಶ್ರೀನಾಥ್ ಆಗ್ರಹ
H.R. Srinath demands creation of Panchanadi Ministry
ಗಂಗಾವತಿ 26: ಕಲುಷಿತ ನದಿಗಳು ಸ್ವಚ್ಛತೆಗಾಗಿ ಪ್ರತ್ಯೇಕ ಸಚಿವಾಲಯಗಳನ್ನು ಮಾಡುವ ಮೂಲಕ ನದಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಹೇಳಿದರು. ಅವರು ತಮ್ಮ ನಿವಾಸದಲ್ಲಿ ನಿರ್ಮಲ ತುಂಗಭದ್ರ ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ನದಿಗಳ ಸ್ವಚ್ಛತೆ ಕುರಿತು ಜನಜಾಗೃತಿ ಅಗತ್ಯವಿದ್ದು, ಕಲಷಿತ ನೀರು ನದಿಪಾತ್ರ ಸೇರದಂತೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ತ್ಯಾಜ್ಯಗಳು ನದಿ ಸೇರದಂತೆ ಎಚ್ಚರಿಕೆ ವಹಿಸಬೇಕಿದೆ, ನೀರು ನಮ್ಮ ಜೀವನಕ್ಕೆ ಅತ್ಯಮುಲ್ಯ, ಆರೋಗ್ಯಯುತ ಜೀವನ ಸವೆಸಬೇಕಾದರೆ ದೊಡ್ಡಪ್ರಮಾಣದ ಬದಲಾವಣೆ ಆಗಬೇಕಿದೆ. ಸಚಿವಾಲಯವಾದರೆ ಮಲಿನತೆ ನಿವಾರಣೆಯಾಗಲಿದೆ. ಗಂಗಾವತಿಯಿಂದ ಪಾದಯಾತ್ರೆ ಹೊರಡುವ ಪಾದಯಾತ್ರೆಗೆ ಸಂಪೂರ್ಣ ಬೆಂಬಲ ನೀಡಬೇಕಿದೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತಪ್ಪ ನಾಯಕ, ಸುರೇಶ್ ಗೌರ್ಪ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 