ಲೋಕದರ್ಶನ ವರದಿ
ಹರಪನಹಳ್ಳಿ 01: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಭಾರತ ವಿದ್ಯಾರ್ಥಿ ಫೆಡರೇಷನ್ ನಿಂದ ರೇಣುಕಾ ಮಾದರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಫ್ಐನಿಂದ ಪ್ರತಿಭಟನೆ ರಾಜ್ಯ ಹಾಗೂ ದೇಶ ಸೇರಿದಂತೆ ಹೆಚ್ಚುತ್ತಿರುವ ಅತ್ಯಾಚಾರ ದೌರ್ಜನ್ಯವನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಿದರು ಭೇಟಿ ಬಚಾವೋ ಭೇಟಿ ಪಡಾವೋ ಅನ್ನುವ ಶ್ರೀರಾಮ ಸೇನೆ ಬಜರಂಗದಳದ ವ್ಯಕ್ತಿಗಳು ಈ ಕೃತ್ಯವನ್ನು ಎಸಗಿರುವುದು ದೇಶವೇ ತಲೆ ತಗ್ಗಿಸುವಂತಾಗಿದೆ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಡುವ ಮೂಲಕ ದುಷ್ಕೃತ್ಯವನ್ನು ಮೆರೆದಿದ್ದಾರೆ
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಅನಂತಪುರ ಗ್ರಾಮದ ಪಿಯುಸಿ ವಿದ್ಯಾರ್ಥಿನಿ ರೇಣುಕಾ ಮಾದರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸ್ ನಿರ್ಲಕ್ಷ್ಯವನ್ನು ಖಂಡಿಸಿ ಹಾಗೂ ಅನುಮಾನಾಸ್ಪದ ಸಾವಿನ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮತ್ತು ಕಠಿಣ ಕಾನೂನು ಶಿಕ್ಷೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐನಿಂದ ತಾಲ್ಲೂಕು ಕಚೇರಿಗೆ ಪ್ರತಿಭಟನೆಯ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಾಲ್ಲೂಕು ಮುಖಂಡರು ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.