ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಎಚ್.ಡಿ.ದೇವೇಗೌಡ

ಬೆಂಗಳೂರು, ಸೆ 4     ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಕಿಡಿಕಾರಿರುವ   ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ ತನಿಖೆಗೆ ಶಿವಕುಮಾರ್ ಎಲ್ಲಾ ರೀತಿಯಲ್ಲಿ ಸಹಕಾರ ನೀಡಿದ್ದರು. ಹಬ್ಬದಂದು ಅವರ  ಕುಟುಂಬದ ಕಾರ್ಯ ನೆರವೇರಿಸಲು ಸಹ ಅವಕಾಶ ನೀಡದೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿಷ್ಕರುಣೆಯಿಂದ ನಡೆದುಕೊಂಡಿದ್ದಾರೆ. ಅಧಿಕಾರಿಗಳ ಈ ಕ್ರಮ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಶಿವಕುಮಾರ್ ಅವರ ತಂದೆಗೆ ಎಡೆ ಇಡುವ ಕಾರ್ಯಕ್ಕೂ ಸಹ  ಅವಕಾಶ ನೀಡದಿರುವ ಘಟನೆ ತಮ್ಮ ಮನಸಿಗೆ ಬೇಸರ ಉಂಟು ಮಾಡಿದೆ. ಒಂದು ದಿನ ಅವಕಾಶ ನೀಡಿದ್ದರೆ ಏನಾಗುತ್ತಿತ್ತು ? ಎಂದು ಪ್ರಶ್ನಿಸಿದ ಅವರು, ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಎಂದರು.