ಪ್ರತಿಭಟನೆ ಮೂಲಕ ಸರ್ಕಾರದ ಕಣ್ತೆರೆಸುವ ಪ್ರಯತ್ನ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ 10:   ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿದ್ದು, ಪ್ರತಿಭಟನೆ ಮೂಲಕ ಸರ್ಕಾರಗಳಿಗೆ ಬಿಸಿಮುಟ್ಟಿಸಲಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೀದಿಗಿಳಿದು ಹೋರಾಟ ಮಾಡಿ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಲಾಗುತ್ತಿದೆ. ಮೂರು ದಿನಗಳ ಕಾಲ ಕಲಾಪದಲ್ಲಿಯೂ ನಮ್ಮ ಹೋರಾಟ ಮುಂದುವರೆಯುತ್ತದೆ. ಮೂರು ತಿಂಗಳಲ್ಲಿ ಸರ್ಕಾರದ ವೈಫಲ್ಯವನ್ನು ಸದನದಲ್ಲಿ ಎಳೆ ಎಳೆಯಾಗಿ ತೆರೆದಿಡುವ ಕೇಲಸ ಮಾಡುವುದಾಗಿ ಹೇಳಿದರು. 

ಮಾಧ್ಯಮಗಳಿಗೆ ಕಡಿವಾಣ ಹಾಕುವ ಅವಶ್ಯಕತೆ ಇರಲಿಲ್ಲ. ಆದರೆ ಈ ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿದ ತಪ್ಪನ್ನು ಬಿಜೆಪಿ ಮುಂದುವರೆಸುತ್ತಿರಬೇಕು.ಹೀಗಾಗಿ ತಮ್ಮ ಕೆಲಸಗಳಿಗೆ ಅಡ್ಡಿಯಾಗಬಾರದೆಂಬ ಕಾರಣಕ್ಕೆ ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.