ಮಹೇಂದ್ರ ಕುಮಾರ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಕಂಬನಿ
ಬೆಂಗಳೂರು,ಏ. 25,ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮಹೇಂದ್ರ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿರುವ ಅವರು, ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ತಮ್ಮೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ತಾವು ಹತ್ತಿರದಿಂದ ಕಂಡಿರುವುದಾಗಿ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ನಮ್ಮ ಧ್ವನಿ' ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು. ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 