ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು, ಏ.2, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಇಂದು ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ವೈರಸ್ ಮತ್ತು ಲಾಕ್ ಡೌನ್ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ವಿಡಿಯೊ ಕಾನ್ಫರೆನ್ಸ್ ನಲ್ಲಿ ಮಂಡ್ಯ ಶಾಸಕ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ, ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ, ಶಿರಾ ಶಾಸಕ ಸತ್ಯನಾರಾಯಣ ಪಾಲ್ಗೊಂಡಿದ್ದರು. ಕೊರೊನಾ ವೈರಸ್ ತಡೆಗೆ ಎರಡೂ ಜಿಲ್ಲೆಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕುಮಾರಸ್ವಾಮಿ ಚರ್ಚಿಸಿದರು.ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವವರಿಗೆ, ಪ್ರಮುಖವಾಗಿ ರೈತರಿಗೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಕ್ಷೇತ್ರದ ಮಟ್ಟದಲ್ಲಿ ನೀಡುವಂತೆ ಸೂಚಿಸಿದರು. ರಾಮನಗರ, ಚನ್ನಪಟ್ಟಣದಲ್ಲಿ ತಾವು ಆರಂಭಿಸಿರುವ 'ಎಚ್‌ಡಿಕೆ ಜನತಾ ದಾಸೋಹ'ವನ್ನು ಎಲ್ಲರೂ ಆರಂಭಿಸಿ ಹಸಿದವರಿಗೆ ಆಹಾರ ಪೂರೈಸುವಂತೆ ತಿಳಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.ಈಗಾಗಲೇ ಕುಮಾರಸ್ವಾಮಿ ರಾಮನಗರ, ಚನ್ನಪಟ್ಟಣ ಭಾಗದ ಶಾಸಕರೊಂದಿಗೆ ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಆ ಭಾಗದಲ್ಲೂ ಎಚ್‌ಡಿಕೆ ಜನತಾ ದಾಸೋಹ ಆರಂಭಿಸಲು ಸೂಚಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 