ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು
ಬೆಂಗಳೂರು, ಫೆ 17 ,ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕನೋರ್ವ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.ಬೆಂಗಳೂರಿನ ರುಕ್ಮಿಣಿ ನಗರದ ಪ್ರಶಾಂತ್ (38)ಆತ್ಮಹತ್ಯೆ ಶರಣಾದ ಆರೋಗ್ಯ ನಿರೀಕ್ಷಕರು.ಮೃತರು ಬೆಂಗಳೂರಿನ ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ದಿನಗಳಿಂದ ಮನೆಯಿಂದ ತೆರಳಿದ್ದ ಪ್ರಶಾಂತ್ ಅವರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ಜಾಡು ಹಿಡಿದ ಪೊಲೀಸರು, ಮೃತ ಪ್ರಶಾಂತ್ ಅವರ ಮೊಬೈಲ್ ಟ್ರ್ಯಾಕ್ ಮಾಡಿದ್ದರು. ನಂತರ ರಾಮನಗರದ ಎಸ್ ಆರ್ ಎಸ್ ಬೆಟ್ಟದಲ್ಲಿ ಮೊಬೈಲ್ ಸಿಗ್ನಲ್ ಪತ್ತೆಯಾಗಿತ್ತು. ತಕ್ಷಣವೇ ಪೊಲೀಸರು ಸ್ಥಳ ಪರಿಶೀಲಿಸಿದಾಗ ಮೃತರ ದ್ವಿ ಚಕ್ರ ವಾಹನ ಬೆಟ್ಟದಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಬೆಟ್ಟದ ಸುತ್ತ ಮುತ್ತಲೂ ಪರಿಶೀಲಿಸಿದಾಗ, ಪ್ರಶಾಂತ್ ಅವರ ಶವ ಪತ್ತೆಯಾಗಿದೆ.ಪ್ರಶಾಂತ್ ಅವರ ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಘಟನೆಗೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 