ಕೊಪ್ಪಳ 29: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಹೆಚ್.ಐ.ವಿ ಮತ್ತು ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ್ ಅವರು ಹೇಳಿದರು.
ಇಂದು (ನ.29) ನಗರದ ಹಳೇ ಜಿಲ್ಲಾ ಆಸ್ಪತ್ರೆಯಲ್ಲಿರುವ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡಿಸೆಂಬರ್. 01 ರಂದು "ವಿಶ್ವ ಏಡ್ಸ್ ದಿನ" ಆಚರಣೆ ಅಂಗವಾಗಿ ಈ ವರ್ಷ "ಸಮುದಾಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ" ಎಂಬ ಘೋಷವಾಕ್ಯದಡಿ ಕನರ್ಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಇವರ ಮಾರ್ಗದರ್ಶನದಂತೆ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕವು ಆರೋಗ್ಯ ಮತ್ತು ಇತರೆ ಇಲಾಖೆಗಳ ಸಿಬ್ಬಂದಿಗೆ ಹೆಚ್.ಐ.ವಿ ಮತ್ತು ಏಡ್ಸ್ ಕುರಿತು ತರಬೇತಿಗಳನ್ನು ಆಯೋಜಿಸುತ್ತದೆ. ವಿವಿಧ ಇಲಾಖೆಗಳೊಂದಿಗೆ ಸಂಯೋಜನೆಯನ್ನು ಏರ್ಪಡಿಸುತ್ತದೆ ಹಾಗೂ ಜಿಲ್ಲೆಯಲ್ಲಿ ಹೆಚ್.ಐ.ವಿ ಮತ್ತು ಏಡ್ಸ್ ಕುರಿತ ಕಾರ್ಯಕ್ರಮದ ನಡೆಯಲಿದೆ ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಹೇಶ ಮಾತನಾಡಿ, ಸಕರ್ಾರಿ ಸಂಸ್ಥೆಗಳಿಂದ ಹೆಚ್.ಐ.ವಿ ಮತ್ತು ಏಡ್ಸ್ ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕವು ಸೆಷ್ಟೆಂಬರ್.01-2008 ರಂದು ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಇದು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಒಂದು ಜಿಲ್ಲಾ ಮಟ್ಟದ ಘಟಕವಾಗಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳನ್ನು ಈಡೇರಿಸಲು ಕಾರ್ಯನಿರ್ವಹಿಸುತ್ತಿದೆ. ಕನರ್ಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಇವರ ಮಾರ್ಗದರ್ಶನದಂತೆ ಆರೋಗ್ಯ ಮತ್ತು ಇತರೆ ಇಲಾಖೆಗಳ ಸಿಬ್ಬಂದಿಗೆ ಹೆಚ್.ಐ.ವಿ ಮತ್ತು ಏಡ್ಸ್ ಕುರಿತು ತರಬೇತಿಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲೆಯ ನಾಲ್ಕೂ ತಾಲ್ಲೂಕುಗಳ ಹೆಚ್ಚು ಪಾಸಿಟಿವ್ ಮತ್ತು ಹೆಚ್.ಆರ್.ಜಿ, ಇರುವ ನಗರ ಮತ್ತು ಗ್ರಾಮಗಳಲ್ಲಿ ಬೀದಿ ನಾಟಕ, ಗೀ-ಗೀಪದ, ಶ್ರೀಕೃಷ್ಣ ಪಾರಿಜಾತ ಹಾಗೂ ಡೊಳ್ಳು ಕುಣಿತ ಕಲಾ ಮತ್ತು ಜಾನಪದ ತಂಡಗಳಿಂದ ಹೆಚ್.ಐ.ವಿ ಮತ್ತು ಏಡ್ಸ್ ಹಾಗೂ ಕಳಂಕ ಮತ್ತು ತಾರತಮ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಹದಿಹರೆಯದ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾಥರ್ಿಗಳಿಗೆ ಆರೋಗ್ಯಕರ ನಡವಳಿಕೆ ಹಾಗೂ ಜೀವನ ಕ್ರಮಗಳ ಬಗ್ಗೆ ಸರಿಯಾದ ಮತ್ತು ಸಮರ್ಪಕ ಮಾಹಿತಿಯನ್ನು ನೀಡಿ ಅವರಲ್ಲಿ ಆರೋಗ್ಯಕರ ಜೀವನ ವಿಧಾನಗಳ ಬಗ್ಗೆ ಜಾಗೃತಿ ನೀಡುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದ್ದು, ಕೊಪ್ಪಳ ಜಿಲ್ಲಾದ್ಯಂತ 2018-19 ನೇ ಸಾಲಿನಲ್ಲಿ 180 (ಸರಕಾರಿ/ಸರಕಾರೇತರ) ಪ್ರೌಢಶಾಲೆಗಳಲ್ಲಿ ಒಟ್ಟು 12,470 ವಿದ್ಯಾಥರ್ಿಗಳು, 11,131 ವಿದ್ಯಾಥರ್ಿನಿಯರಿಗೆ ಮತ್ತು 15 ಪದವಿ-ಪೂರ್ವ ಕಾಲೇಜುಗಳಲ್ಲಿ ಒಟ್ಟು 1,398 ವಿದ್ಯಾಥರ್ಿಗಳು, 797 ವಿದ್ಯಾಥರ್ಿನಿಯರಿಗೆ ಆರೋಗ್ಯ ಅರಿವು ಕಾರ್ಯಕ್ರಮವನ್ನು ನೀಡಲಾಗಿದೆ ಎಂದರು.
ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಮಾಲತೇಶ, ಪರಿವೀಕ್ಷಣಾ ಮೇಲ್ವಿಚಾರಕ ರವಿ ಎಸ್. ಪತ್ತಾರ, ಆಡಳಿತ ಸಹಾಯಕಿ ರಾಘವೇಣಿ ಇದೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.