ಬಳ್ಳಾರಿಯಲ್ಲಿ ಎಚ್‌ಐವಿ ಜಾಗೃತಿ ಅಭಿಯಾನ ಯಶಸ್ವಿ
HIV awareness campaign successful in Ballari
ಬಳ್ಳಾರಿ 01: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎಚ್‌ಐವಿ ನಿಯಂತ್ರಣ ಘಟಕದ ಸಹಯೋಗದೊಂದಿಗೆ ಬಳ್ಳಾರಿಯಲ್ಲಿ ಎಚ್‌ಐವಿ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.
ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ‘ಜೆಎಸ್‌ಡಬ್ಲ್ಯು ಸ್ಟೀಲ್ ಸಿಟಿ 2026' ನೋಂದಣಿ ಕಾರ್ಯಕ್ರಮದ ಅಂಗವಾಗಿ, ಜೆಎಸ್‌ಡಬ್ಲ್ಯು ಸಹಕಾರದೊಂದಿಗೆ ‘ಬಳ್ಳಾರಿ ಸೈಕ್ಲಿಸ್ಟ್ ಮತ್ತು ರನ್ನರ್ಸ್ ಫೌಂಡೇಶನ್’ ವತಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದ ವೇಳೆ ಸಾರ್ವಜನಿಕರಿಗೆ ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಎಚ್‌ಐವಿ ಕಾಯಿಲೆಯ ಮೂಲಭೂತ ಮಾಹಿತಿ, ತಡೆಗಟ್ಟುವ ಕ್ರಮಗಳು, ಸೋಂಕಿನ ಅಪಾಯಕಾರಿ ಅಂಶಗಳು ಹಾಗೂ ತಮ್ಮ ಎಚ್‌ಐವಿ ಸ್ಥಿತಿಯನ್ನು ತಿಳಿದುಕೊಳ್ಳುವ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಸಾರ್ವಜನಿಕರು ಸಮೀಪದ ಐಸಿಟಿಸಿ (ಇಂಟಿಗ್ರೇಟೆಡ್ ಕೌನ್ಸೆಲಿಂಗ್ ಮತ್ತು ಟೆಸ್ಟಿಂಗ್ ಸೆಂಟರ್) ಕೇಂದ್ರಗಳಿಗೆ ಭೇಟಿ ನೀಡಿ ಉಚಿತವಾಗಿ ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪ್ರೋತ್ಸಾಹಿಸಲಾಯಿತು.
ಅಭಿಯಾನದ ಸಂದರ್ಭದಲ್ಲಿ ಸುಮಾರು 200 ರಿಂದ 300 ಜನರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಚ್‌ಐವಿ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, 500ಕ್ಕೂ ಹೆಚ್ಚು ಜನರಿಗೆ ನೇರವಾಗಿ ಎಚ್‌ಐವಿ ಹಾಗೂ ಏಡ್ಸ್ ಕುರಿತು ಅರಿವು ಮೂಡಿಸಿ ಅಗತ್ಯ ಮಾಹಿತಿಯನ್ನು ನೀಡಲಾಯಿತು.
ಎಚ್‌ಐವಿ ಸೋಂಕಿನ ಬಗ್ಗೆ ಅನುಮಾನ ಅಥವಾ ಅಪಾಯದ ನಡವಳಿಕೆ ಹೊಂದಿರುವವರು ತಕ್ಷಣವೇ ಸಮೀಪದ ಐಸಿಟಿಸಿ ಕೇಂದ್ರಗಳಿಗೆ ತೆರಳಿ ಉಚಿತ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಎಚ್‌ಐವಿ ನಿಯಂತ್ರಣಾಧಿಕಾರಿ ಡಾ. ಇಂದಿರಾಣಿ ಅವರು ತಿಳಿಸಿದ್ದಾರೆ.
ಎಚ್‌ಐವಿ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದ್ದು, ಜಾಗೃತಿ ಮತ್ತು ಸಮಯೋಚಿತ ಪರೀಕ್ಷೆಯಿಂದ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 