ಹೊಸ ತಂತ್ರಜ್ಞಾನ ಮತ್ತು ಪರಿಕರಗಳನ್ನು ಕಲಿಯಲು ಹ್ಯಾಕ್ ಫೆಸ್ಟ್ ಸಹಕಾರಿ: ಡಾ. ದೀಪಕ ಕೆ. ಟಿ.
Hack Fest helps in learning new technology and tools: Dr. Deepak K. T.
ಬೆಳಗಾವಿ 21: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಹಾಗು ಜಗತ್ತಿನಲ್ಲಾಗುವ ಹೊಸ ಹೊಸ ತಂತ್ರಜ್ಞಾನಗಳು ಮತ್ತು ಪರಿಕರಗಳನ್ನು ಕಲಿಯಲು ಹ್ಯಾಕ್ ಫೆಸ್ಟ್ ಸಹಕಾರಿ ಎಂದು ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ. ದೀಪಕ ಕೆ. ಟಿ. ಅಭಿಮತ ವ್ಯಕ್ತಪಡಿಸಿದರು.
ಅವರು ಮಂಗಳವಾರ ಇಲ್ಲಿನ ಶಿವಬಸವ ನಗರದ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೈನ್ 2.0 ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ಹ್ಯಾಕ್ ಫೆಸ್ಟ್ ಉದ್ಘಾಟಿಸಿ ಮಾತನಾಡಿದರು.
ಮುಂದುವರಿದು ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿ, ತಂಡಗಳಲ್ಲಿ ಕೆಲಸ ಮಾಡುವ ಗುಣ ಹಾಗೂ ಸಂಶೋಧನಾ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮನೋಭಾವ ಬೆಳಸಬೇಕಿದೆ. ಇದರಿಂದ ಸ್ವಾರ್ಥ ರಹಿತ ಹಾಗೂ ಮನುಕುಲ ಉದ್ಧಾರಕ್ಕೆ ನೆರವಾಗುವ ಸಂಶೋಧನೆಗಳು ಹೊರಬರುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ ವಿಜ್ಞಾನ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ನೂತನ ಆವಿಷ್ಕಾರಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗು ಮಾಹಿತಿ ವಿನಿಮಯ ಮಾಡುವ ಉದ್ದೇಶದಿಂದ ಕಾಲೇಜಿನಲ್ಲಿ ಹ್ಯಾಕ್ ಫೆಸ್ಟ್ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹಿರಿಯ ಐಎಎಸ್ ಅಧಿಕಾರಿ ರಾಹುಲ ಸಂಕನೂರ್, ಕೆಎಎಸ್ ಅಧಿಕಾರಿ ನಿಖಿಲ್ ಚಿಕ್ಕಿ ಆನ್ಲೈನ್ ಮೂಲಕ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಂಶೋಧನೆ ಕೈಗೊಳ್ಳಲು ಪ್ರೇರಣೆ ನೀಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಚೇರ್ಮನ್ ಡಾ. ಎಫ್. ವಿ. ಮಾನ್ವಿ, ವಿಭಾಗ ಮುಖ್ಯಸ್ಥರಾದ ಡಾ. ಬಸವಪ್ರಭು ಹಲಕರ್ಣಿಮಠ,ಡಾ.ಅಶೋಕ ಹುಲಗಬಾಳಿ ಪ್ರಾಧ್ಯಾಪಕ ಡಾ. ಪ್ರಶಾಂತ ಭಗವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ರಾಜ್ಯ ಮಟ್ಟದ ಈ ಹ್ಯಾಕಥಾನ್ ನಲ್ಲಿ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ , ಕೌಶಲ್ಯ, ಕಡಿಮೆ ವೇಳೆಯಲ್ಲಿ ಕಾರ್ಯ ನಿರ್ವಹಣೆಯ ದಕ್ಷತೆ ಯನ್ನು ತೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 