ಹಡಪದ ಅಪ್ಪಣ್ಣ ಅವರ ದಾರಿಯಲ್ಲಿ ಎಲ್ಲರೂ ನಡೆಯೋಣ:ಮಹೇಶ ಗಸ್ತೆ
Hadapa Appanna Jayanti Celebration by Taluk Administration
ತಾಲೂಕು ಆಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಹುಬ್ಬಳ್ಳಿ 10: ಸಮಾಜದಲ್ಲಿ ಪ್ರತಿ ಒಬ್ಬರು ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತು ಮಾಡಬೇಕು. ಶಿವಶರಣ ಹಡಪದ ಅಪ್ಪಣ್ಣ ಅವರ ಹಾಗೆ ಉತ್ತಮ ಚಿಂತನೆ, ಆಲೋಚನೆ, ತತ್ವ ಬೋಧನೆ, ನಡೆ ನುಡಿಗಳನ್ನು ನಮ್ಮ ಜೀವನದ್ದಕ್ಕೂ ಅಳವಡಿಸಿಕೊಂಡು ನಡೆಯಬೇಕು ಎಂದು ಹುಬ್ಬಳ್ಳಿ ನಗರ ತಹಶೀಲ್ದಾರರಾದ ಮಹೇಶ ಗಸ್ತೆ ಹೇಳಿದರು.ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದಿಂದಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮಾಜ ಸೇವೆಗೆ ಎಲ್ಲರೂ ಮುಂದಾಗಬೇಕು. ಹಡಪದ ಅಪ್ಪಣ್ಣ ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸುವುದು ಅವಶ್ಯಕವಾಗಿದೆ. ಅವರು ತೋರಿದ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರಾದ ಜೆ.ಬಿ.ಮಜ್ಜಗಿ, ಕಂದಾಯ ಇಲಾಖೆಯ ರಘು ಬಮ್ಮನಾಳ, ಶ್ರೀನಿವಾಸ್ ಹುಬ್ಬಳ್ಳಿ, ಮಾರುತಿ ಹಡಪದ, ಫಕ್ಕೀರೇಶ್ ಹಡಪದ, ಎಫ.ಎಸ್.ತೆಂಬದಮನಿ, ಶಿವಪುತ್ರ್ಪ ಇಟಗಿ, ಸಿದ್ದಪ್ಪ ನವಲಗುಂದ, ಮಹಾರುದ್ರ್ಪ ಪಡೆಸೂರ, ಮಲ್ಲಪ್ಪ ಗೊಬ್ಬರಗುಂಪಿ, ಮಂಜು ಪಾಟೀಲ, ಶಾಂತಕ್ಕ ಹಡಪದ, ಫಕ್ಕೀರ್ಪ ಹಡಪದ, ಗುರುನಾಥ ಹಳ್ಯಾಳ, ಉಮೇಶ ಹಡಪದ, ಹನುಮಂತಪ್ಪ ಹಡಪದ, ಪಾರಮ್ಮ ಹಡಪದ, ಮಲ್ಲಮ್ಮ ಹಡಪದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ಮುಖಂಡರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 