ಹಡಪದ ಅಪ್ಪಣ್ಣನವರ ಜಯಂತಿ
Hadapad Appanna Jayanti
ದೇವರಹಿಪ್ಪರಗಿ 10: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರೀದೀಪಗಳಾಗಿವೆ’ ಎಂದು ದೇವರಹಿಪ್ಪರಗಿ ಜಾಲವಾದ ಗದ್ದಗಿಮಠದ ಕಿರಿಯ ಮಹಾಂತ ಶ್ರೀಗಳು ಹೇಳಿದರು.ಪಟ್ಟಣದ ಹಡಪದ ಓಣಿಯಲ್ಲಿ ನಡೆದ ತಾಲ್ಲೂಕು ಆಡಳಿತ ಹಾಗೂ ಸಮುದಾಯದ ವತಿಯಿಂದ ಗುರುವಾರ ನಡೆದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಸಪಾ ತಾಲೂಕು ಘಟಕದ ಸಂಗಪ್ಪ ತಡವಲ, ಕಂದಾಯ ಶಿರಸ್ತೇದಾರ ಸುರೇಶ ಮ್ಯಾಗೇರಿ,ಮುಖಂಡರಾದ ರಾವುತ್ ತಳಕೇರಿ, ಕೆಡಿಪಿ ಸದಸ್ಯರಾದ ಪ್ರಕಾಶ ಗುಡಿಮನಿ ಅವರು ಮಾತನಾಡಿ ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ’ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ ಹಡಪದ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರೀಯಾಜ ಯಲಿಗಾರ,ಬಸಪ್ಪ ದೇವಣಗಾಂವ, ಕಾಸು ಭಜೆಂತ್ರಿ,ಸುನೀಲ್ ಪಾಟೀಲ, ಮಲ್ಲು ಹಡಪದ,ದೇವಾನಂದ ಹಡಪದ, ದೇವಿಂದ್ರ ಹಡಪದ,ಮಡು ಹಡಪದ,ಸೋಮರಾಯ ಹಡಪದ, ನಾಗರಾಜ ಹಡಪದ,ಸಾಯಿಬಣ್ಣ ಹಡಪದ,ಮುರ್ತುಜಾ ತಾಂಬೋಳಿ, ರಮೇಶ,ಇಳಗೇರ ಪಿಂಟೂ ಬಾಸುತ್ಕರ್ ಸೇರಿದಂತೆ ಹಲವಾರು ಮುಖಂಡರು ಹಾಗೂ ಸಮುದಾಯದವರು ಭಾಗವಹಿಸಿದ್ದರು.ಮೆರವಣಿಗೆ: ಶಿವಶರಣ ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ತ ಪಟ್ಟಣದ ಇಂಡಿ ರಸ್ತೆಯಲ್ಲಿ ಹಡಪದ ಅಪ್ಪಣ್ಣ ವೃತ್ತ ನಾಮಫಲಕವನ್ನು ಉದ್ಘಾಟಿಸಲಾಯಿತು. ನಂತರ ನಡೆದ ಮೆರವಣಿಗೆಯಲ್ಲಿ ಹಡಪದ ಅಪ್ಪಣ್ಣನವರ ಫೋಟೋ ವಚನಕಟ್ಟು ನೋಡುಗರನ್ನು ಆಕರ್ಷಿಸಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 