ಜಾತಿ-ಧರ್ಮ ಮೀರಿ ಸಮಾಜ ಸುಧಾರಣೆಗೆ ಶ್ರಮಿಸಿದವರು ಹಡಪದ ಅಪ್ಪಣ್ಣ: ತಹಶೀಲ್ದಾರ್
Hadapada Appanna Strove for Social Reform Beyond Caste and Religion: Tahsildar
ಯರಗಟ್ಟಿ 29 : ಶರಣ ಹಡಪದ ಅಪ್ಪಣ್ಣನವರು ಜಾತಿ, ಧರ್ಮ, ವರ್ಣ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಹೇಳಿದರು. ಬುಧವಾರ ಪಟ್ಟಣ ತಹಶೀಲ್ದಾರ ಕಚೇರಿಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಸಲ್ಲಿಸಿ ತಹಶೀಲ್ದಾರ ಅವರು ಮಾತನಾಡಿದರು. ಅಪ್ಪಣ್ಣನವರು 12ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ ಎಂದು ಹೇಳಿದರು. ಹಡಪದ ಸಮಾಜದ ತಾಲೂಕಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಡಪದ ಮಾತನಾಡಿ, ಸರ್ಕಾರ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಆದರೆ ಕ್ಷೌರಿಕ ವೃತ್ತಿಯನ್ನು ಮಾಡುತ್ತಿರುವವರು ಯಾರೂ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿಲ್ಲದ ಕಾರಣ ಸರ್ಕಾರದ ಸೌಲಭ್ಯ ಸಿಕ್ಕಿಲ್ಲ ಎಂದರು ಹಾಗೂ ಹಡಪದ ಸಮಾಜಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮಂಜುರು ಮಾಡುವಂತೆ ತಹಶೀಲ್ದಾರರಿಗೆ ಮನವಿ ಮಾಡಿದರು. ಈ ವೇಳೆ ಗ್ರಾಮ ಆಡಳಿತಾಧಿಕಾರಿ ಎಲ್. ಬಿ. ದಳವಾಯಿ, ಶಾಹೀನ ಮೀಶ್ರಕೋಟಿ, ಬಾಲಕೃಷ್ಣ ಹಡಪದ, ಶಂಕರ್ಪ ನಾವಿ, ಸಿದ್ದಪ್ಪ ನಾವಿ, ಮುತ್ತು ನಾವಿ, ಜಗದೀಶ ನಾವಿ, ಈರಣ್ಣಾ ಹಡಪದ, ಅಪ್ಪಣ್ಣಾ ನಾವಿ, ನಿಂಗಪ್ಪ ನಾವಿ, ಗಣೇಶ ನಾವಿ, ಸಂಗಪ್ಪಾ ನಾವಿ, ಸಂತೋಷ ಹಡಪದ, ರಮೇಶ ನಾವಿ, ತುಕಾರಾಮ ನಾವಿ ಸೇರಿದಂತೆ ಅನೇಕರು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 