ಹಂಪಿ: ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವಾಗಿ ರೂಪಿಸುವ ಮಹತ್ವದ ಸಮಾಲೋಚನಾ ಕಾರ್ಯಾಗಾರ ಜುಲೈ 7ರಂದು
Hampi: A significant consultative workshop to transform Karnataka into a global tourism destination
ಬಳ್ಳಾರಿ 06: ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರವಾಸೋದ್ಯಮ ತಾಣವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ‘ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿ’ ಕುರಿತು ರಾಜ್ಯಮಟ್ಟದ ಸಮಾಲೋಚನಾ ಕಾರ್ಯಾಗಾರ ಜುಲೈ 7ರಂದು ಹಂಪಿಯಲ್ಲಿ ಆಯೋಜಿಸಲಾಗಿದೆ.
ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬಾಶಿಶ್ ದಾಸ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಚನ, ಆಯುಕ್ತ ರಮೇಶ್ ಮನೋಹರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್, ಪ್ರವಾಸೋದ್ಯಮ ವಲಯದ ಹೂಡಿಕೆದಾರರು, ಆತಿಥ್ಯ ಉದ್ಯಮದ ಪ್ರತಿನಿಧಿಗಳು ಹಾಗೂ ತಜ್ಞರು ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಆಯೋಜಿಸಿರುವ ಈ ಸಭೆಯಲ್ಲಿ, ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಹೂಡಿಕೆ ಅವಕಾಶಗಳು, ಪ್ರವಾಸಿಗರ ಅನುಭವ ಸುಧಾರಣೆ, ಪರಿಸರ ಸಂರಕ್ಷಣೆ, ಸ್ಥಳೀಯ ಸಮುದಾಯದ ಭಾಗವಹಿಕೆ, ಸಂಪರ್ಕ ವ್ಯವಸ್ಥೆ, ಬ್ರ್ಯಂಡಿಂಗ್ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ತಂತ್ರಗಳ ಕುರಿತು 360 ಡಿಗ್ರಿ ಚರ್ಚೆ ನಡೆಯಲಿದೆ.
ಪ್ರವಾಸಿ ತಾಣಗಳ ಆಯ್ಕೆಗಾಗಿ ಮಾನದಂಡಗಳು, ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸಿಗರ ಅನುಭವ ಸುಧಾರಣೆ, ಖಾಸಗಿ ಹೂಡಿಕೆ ಉತ್ತೇಜನ, ಪರಿಸರ ಸಂರಕ್ಷಣೆ ಹಾಗೂ ಸಸ್ಥಿರ ಪ್ರವಾಸೋದ್ಯಮ ಮಾದರಿಗಳ ಕುರಿತು ತಜ್ಞರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.
ಸಭೆಯಲ್ಲಿ ವ್ಯಕ್ತವಾಗುವ ಸಲಹೆಗಳು ಮತ್ತು ಶಿಫಾರಸುಗಳ ಆಧಾರದ ಮೇಲೆ ರಾಜ್ಯದ ಮೊದಲ ಹಂತದಲ್ಲಿ ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಬಹುದಾದ ಸ್ಥಳಗಳನ್ನು ಅಂತಿಮಗೊಳಿಸುವ ನಿರ್ಧಾರ ಕೈಗೊಳ್ಳಲಾಗುವುದು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 