ಕೈ-ಜೆಡಿಎಸ್ ಮೈತ್ರಿ: ಸಿದ್ದು
ನವದೆಹಲಿ:ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರೆ, ಮತ್ತೊಂದೆಡೆ ರಾಹುಲ್ ಗಾಂಧಿ ನೇತೃತ್ವಕ್ಕೆ ನಮ್ಮ ಯಾವುದೇ ತಕರಾರು ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸೋಮವಾರ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕುರಿತು ಹೇಳಿದರು.ಆಷಾಢ ಮಾಸದ ಬಳಿಕ ನಿಗಮ, ಮಂಡಳಿಗೆ ಆಯ್ಕೆ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ರಾಹುಲ್ ನಾಯಕತ್ವಕ್ಕೆ ಜೈ, ಸ್ಥಾನ ಹಂಚಿಕೆ ಮಾತುಕತೆ ನಡೆದಿಲ್ಲ;
ರಾಹುಲ್ ನೇತೃತ್ವ ಒಪ್ಪಿಕೊಳ್ಳಲು ಯಾವುದೇ ತಕರಾರು ಇಲ್ಲ ಎಂದು ಹೇಳಿರುವ ದೇವೇಗೌಡರು, ಲೋಕಸಭಾ ಚುನಾವಣೆಗಾಗಿ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ, ಅದರ ಬಗ್ಗೆ ಇನ್ನಷ್ಟೇ ನಿಧರ್ಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯೇ ಆಗಲ್ಲ; ಅಸ್ನೋಟಿಕರ್:
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ನಡೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ರಾಹುಲ್ ಗಾಂಧಿ ನಾಯಕತ್ವಕ್ಕೆ ಯಾವುದೇ ವಿರೋಧ ಇಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಹುಪರಾಕ್ ಹೇಳಿದ್ದರು. ಮತ್ತೊಂದೆಡೆ ಜೆಡಿಎಸ್ ಮುಖಂಡ ಅಸ್ನೋಟಿಕರ್, ರಾಹುಲ್ ಗಾಂಧಿ ಪ್ರಧಾನಿಯೇ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಏಕಾಂಗಿಯಾಗಿ ಸ್ಪಧರ್ಿಸಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 