ಮುಂಡಗೋಡ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್‌ ಹಸ್ತಾಂತರ

ಮುಂಡಗೋಡ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್‌ ಹಸ್ತಾಂತರ  Handover of well-equipped ambulance to Mundagoda Hospital

ಲೋಕದರ್ಶನ ವರದಿ  

ಮುಂಡಗೋಡ 10:  ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಮಹತ್ವದ ಕಾರ್ಯಕ್ರಮ ನಡೆಯಿತು. ಶಾಸಕರಾದ ಶಿವರಾಮ ಹೆಬ್ಬಾರ್ ಅವರು “ನ್ಯೂಕ್ಲಿಯರ್ ಪವರ್ ಕಾರ​‍್ೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಕೈಗಾ)” ಸಂಸ್ಥೆಯ ಸಿ.ಎಸ್‌.ಆರ್ ಅನುದಾನದಡಿ ಒದಗಿಸಲಾದ ಅಂಬ್ಯುಲೇನ್ಸ್‌ ಅನ್ನು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನತೆಗೆ ತುರ್ತು ವೈದ್ಯಕೀಯ ಸೇವೆಗಳು ಸುಲಭವಾಗಿ ದೊರಕುವಂತೆ ಮಾಡುವಲ್ಲಿ ಈ ಅಂಬ್ಯುಲೇನ್ಸ್‌ ಸಹಾಯಕವಾಗಲಿದೆ ಎಂದು ತಿಳಿಸಿದರು. ಆರೋಗ್ಯ ಸೇವೆಗಳ ಬಲವರ್ಧನೆಗೆ ಇಂತಹ ಸೌಲಭ್ಯಗಳು ಅಗತ್ಯವಾಗಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ನ್ಯೂಕ್ಲಿಯರ್ ಪವರ್ ಕಾರ​‍್ೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನ ಅಧಿಕಾರಿಗಳು, ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.