ಆಗಸ್ಟ್ 24 ಮತ್ತು 25ರಂದು ಹಣ್ಣಿಕೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ
Hannikeri Cluster-level Sports Meet on August 24 and 25
ಬೆಳಗಾವಿ 04 : ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026ನೇ ಸಾಲಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಆಗಸ್ಟ್ 24 ಮತ್ತು 25ರಂದು ಹಣ್ಣಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹಣ್ಣಿಕೇರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿಆರ್ಿ) ಎಸ್. ಎಸ್. ಪಾಟೀಲ ತಿಳಿಸಿದ್ದಾರೆ. ಹಣ್ಣಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 24ರಂದು ಅಥ್ಲೆಟಿಕ್ಸ್ (ಮೈದಾನ ಸ್ಪರ್ಧೆಗಳು) ಹಾಗೂ ಆಗಸ್ಟ್ 25ರಂದು ಗುಂಪು ಆಟಗಳ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಅಥ್ಲೆಟಿಕ್ಸ್ ಹಾಗೂ ಗುಂಪು ಆಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಹೆಸರನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕ ಪೂರ್ವ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಆಗಸ್ಟ್ 17ರೊಳಗೆ ಕ್ಲಸ್ಟರ್ನ ಎಲ್ಲ ಕ್ರೀಡಾಪಟುಗಳ ಪಟ್ಟಿಯನ್ನು ಹಣ್ಣಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಲ್ಲಿಸುವಂತೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಹಣ್ಣಿಕೇರಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ ಪಾಟೀಲ ವಹಿಸಿದ್ದರು. ಈ ಸಂದರ್ಭದಲ್ಲಿ ವಿ.ಸಿ. ಅಡಕಿ, ಬಿ.ಎಂ. ಕಡೋಲ್ಕರ್, ಪಿ.ಎಂ. ಜೋರಾಪುರ ಮಾತನಾಡಿದರು. ಎಸ್.ಬಿ. ಲಠ್ಠೆ ಸ್ವಾಗತಿಸಿದರು. ಸಭೆಯಲ್ಲಿ ಆರಿ್ಬ. ಮಲ್ಲೂರ, ಪ್ರಕಾಶ ನಾಯ್ಕರ, ಬಿ.ಎಲ್. ಇಂಚಲ, ಎಂ.ವಿ. ಪಾಟೀಲ, ಓ.ಎಸ್. ಚಿಕ್ಕಲದಿನ್ನಿ, ಆರ್.ಎಫ್. ಪಾಟೀಲ ಸೇರಿದಂತೆ ಹಣ್ಣಿಕೇರಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 