ಹಣಮಂತ ಅಕ್ಕೆನ್ನವರ ಆಯ್ಕೆ

Hanumanta Akkennavar selected

ಹಾರೂಗೇರಿ 19: ರಾಯಬಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಹಣಮಂತ ಸದಾಶಿವ ಅಕ್ಕೆನ್ನವರ ಅವರನ್ನು ಬೆಳಗಾವಿ ಜಿಲ್ಲಾ ಪರಿಶಿಷ್ಟ ಪಂಗಡ/ಅಲೇಮಾರಿ ಅಭಿವೃದ್ಧಿ ನಿಗಮದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ಸರ್ಕಾರ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆಮಾಡಿ ಆದೇಶ ಹೊರಡಿಸಿದೆ.